ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ತಾಲ್ಲೂಕಿನಲ್ಲಿ ಬಾರಿ ಪೈಪೆÇೀಟಿ

ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಫೆ.24:- ತಾಲ್ಲೂಕಿನ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೆÇೀಟಿ ನಡೆದಿದ್ದು, ಅಧಿಕ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆಯಾ ಗಿರುವುದು ಕಾರ್ಯಕರ್ತರು, ಮುಖಂಡರಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಕಳೆದ ವಿಧಾನಸಭಾ ಚುನಾವಣೆ ಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆಕುಸಿದು ಠೇವಣಿ ಕಳೆದು ಕೊಂಡ ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೆÇೀಟಿ ನಿರ್ಮಾಣ ವಾಗಿದೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಜೈನ್, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಬಾಜಪ ಯೂತ್ ಅಧ್ಯಕ್ಷ ಹೊಸೂರು ಧರ್ಮ, ಹಿಂದುಳಿದ ವರ್ಗಗಳ ಅಧ್ಯಕ್ಷ ಚಿಕ್ಕೇಗೌಡ, ಯುವ ಮುಖಂಡ ತಿಲಕ್, ಹಾಲಿ ಅಧ್ಯಕ್ಷ ಮಂಜುನಾಥ್ ಸೇರಿದಂತೆ 38 ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಈಗಾಗಲೇ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಹಾಗೂ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿರುವ ಜಾಬಗೆರೆ ರಮೇಶ್ ಅವರು ಪತ್ರಿಕೆ ತಿಳಿಸಿದರು.
ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಮತ್ತು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹಾದೇವಸ್ವಾಮಿ ಅವರ ನೇತೃತ್ವದಲ್ಲಿ ಸಮಿತಿಯು ಪ್ರಬಲವಾಗಿರುವ ವ್ಯಕ್ತಿ ಅಥವಾ ಯುವಕರನ್ನು ಆಯ್ಕೆ ಮಾಡಲು ಈಗಾಗಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರುಗಳಿಂದ ಮಾಹಿತಿ ಕಲೆ ಹಾಕಿ ನಂತರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುವ ಸಂಬಂದ ಶಿಪಾರಸ್ಸು ಮಾಡಲಾಗುವುದು ಎನ್ನಲಾಗಿದೆ.
ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲ್ಲೂಕಿನಲ್ಲಿ ಬಿಜೆಪಿ ಸಾಕಷ್ಟು ಕಾರ್ಯಕರ್ತರು ಮತ್ತು ಮತದಾರರನ್ನು ಹೊಂದಿದ್ದರೂ ನಾಯಕತ್ವದ ಕೊರತೆಯಿಂದ ಪಕ್ಷ ಬಲಿಷ್ಠವಾಗಲು ಮತ್ತು ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿ ಬಂದಿರುವುದರಿಂದ ವರಿಷ್ಠರು ಯಾರಿಗೆ ಅಧ್ಯಕ್ಷ ಸ್ಥಾನ ನೀಡುತ್ತಾರೆ ಎಂದು ಕಾದು ನೋಡ ಬೇಕಿದೆ.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಡಿ.ರವಿಶಂಕರ್ ಅವರಿಗೆ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ದ ಹೋರಾಟಕ್ಕೆ ಪ್ರಬಲವಾಗಿ ಪೈಪೆÇೀಟಿ ಕೊಡುವ ಹಾಗೂ ಎಲ್ಲರನ್ನು ಸಮತೋಲನದಲ್ಲಿ ಕರೆದೊಯ್ಯುವ ವ್ಯಕ್ತಿ ಅಥವಾ ಯುವಕರನ್ನು ನೇಮಕ ಮಾಡಲು ಈಗಾಗಲೇ ಕೋರ ಕಮಿಟಿ ಸಮಿತಿಯ ಸಭೆಯಲ್ಲಿ ಚರ್ಚಿಸಿ ಒಬೊಬ್ಬರು ಸಮಿತಿ ಸದಸ್ಯರಿಂದ ಮಾಹಿತಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.