ಬಿಜೆಪಿ ಅಭ್ಯರ್ಥಿಗೆ ಬಿಎಸ್‌ವೈ ಅಭಿನಂದನೆ

ಬೆಂಗಳೂರು,ಮೇ ೨- ಉಪಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಮತದಾರರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಧನ್ಯವಾದ ಹೇಳಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಯನ್ನು ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವಿಗೆ ಕಾರಣರಾದ ಕ್ಷೇತ್ರದ ಎಲ್ಲ ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ಅವರು ಧನ್ಯವಾದ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಗೆದ್ದ ಶರಣುಸಲಗಾರ ಅವರನ್ನೂ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.
ಡಿಕೆಶಿ ಅಭಿನಂದನೆ
ಮಸ್ಕಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನ ಬಸನಗೌಡ ತುರವಿಹಾಳ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಹಾಗೆಯೇ ಬಸವ ಕಲ್ಯಾಣ ಕ್ಷೇತ್ರದಲ್ಲಿ ಪರಾಭವಗೊಂಡ ಮಾಲಾ ನಾರಾಯಣರಾವ್ ಅವರಿಗೂ ದೂರವಾಣಿ ಮಾಡಿ ಸೋಲಿನಿಂದ ಅಧೈರ್ಯ ಬಿಡಬೇಡಿ ಎಂದು ಸಮಾಧಾನದ ಮಾತು ಹೇಳಿದ್ದಾರೆ.