ಬಿಜೆಪಿ ಆಡಳಿತ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಯಚೂರು.ಏ.೧೧- ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ವಿರೋಧಿಸಿ, ಇಂದು ಮಸ್ಕಿ ಕನಕವೃತ್ತದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲಿ ಗ್ಯಾಸ್, ಪೆಟ್ರೋಲ್ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದೆಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ನಿಯಂತ್ರಣದಲ್ಲಿತ್ತು. ಆದರೆ, ಈಗ ಬೆಲೆ ಗಗನಕ್ಕೇರಿ ಪರಿಸ್ಥಿತಿ ಗಂಭೀರವಾಗಿದೆ. ದುಬಾರಿ ಬೆಲೆಯ ಮಧ್ಯೆ ಜೀವನ ನಿರ್ವಹಿಸುವುದು ಕಷ್ಟವಾಗಿದೆಂದು ಪ್ರತಿಭಟಿಸಿದ ಕಾಂಗ್ರೆಸ್ ಈ ಪ್ರತಿಭಟನೆಯಲ್ಲಿ ಕೆಲ ಕಾಂಗ್ರೆಸ್ ಮಹಿಳಾ ಮುಖಂಡರು ಅನ್ಯಭಾಗ್ಯದ ಯೋಜನೆಯ ಚೀಲ ಮತ್ತು ತರಕಾರಿ ಪುಟ್ಟಿಗಳನ್ನು ತಲೆ ಮೇಲೆ ಹೊತ್ತುಕೊಂಡು ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.
ಈ ಪ್ರತಿಭಟನೆಯಲ್ಲಿ ನಿರ್ಮಲಾ ಬೆಣ್ಣೆ, ಶ್ರೀದೇವಿ ನಾಯಕ, ರೇಖಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.