ಬಿಜೆಪಿ ಕಚೇರಿಯಲ್ಲಿ ಕನಕದಾಸ ಜಯಂತಿ ಆಚರಣೆ

ಬೀದರ: ನ.23:ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಬೀದರ್ ನಗರ ಮಂಡಲ ವತಿಯಿಂದ ಕನಕದಾಸ ಜಯಂತಿ ಆಚರಿಸಲಾಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಕನಕದಾಸರು ಸಮಾಜ ಸುಧಾರಣೆಗೆ ಶ್ರಮಿಸಿದ್ದರು. ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಅವರು ಹೇಳಿದರು.

ಬಿಜೆಪಿ ವಿಭಾಗ ಸಂಘಟನಾ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ನಗರ ಮಂಡಲ ಅಧ್ಯಕ್ಷ ಹಣಮಂತ ಬುಳ್ಳಾ, ಮುಖಂಡರಾದ ಮಹೇಶ್ವರ ಸ್ವಾಮಿ, ಫರ್ನಾಂಡೀಸ್ ಹಿಪ್ಪಳಗಾಂವ್, ಸುಭಾಷ ಮಡಿವಾಳ, ಸುನೀಲ್ ಭಾವಿಕಟ್ಟಿ ಮತ್ತಿತರರು ಇದ್ದರು.