ಬಿಜೆಪಿ ಕಚೇರಿಯಲ್ಲಿ ಚುನಾವಣಾ ವಿಜಯೋತ್ಸವ


ದಾವಣಗೆರೆ.ನ.೧೧; ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಚೇರಿಯಲ್ಲಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ವೀರೇಶ್ ಹನಗನವಾಡಿ ನೇತೃತ್ವದಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್ ಜಗದೀಶ್, ಯಶವಂತರಾಜ್ ಜಾದವ್, ದೂಡ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಮಂಡಲದ ಅಧ್ಯಕ್ಷರು, ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಮೋರ್ಚದ ಅಧ್ಯಕ್ಷರುಗಳು, ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮತ್ತು ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.