ಅಕ್ಕಿ ಸಮರ
ಅಕ್ಕಿ ನೀಡದ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕಾಂಗ್ರೆಸ್ ಕಾರ್‍ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬೆಂಗಳೂರು,ಜು.೫-ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ವಂಚನೆ ನಡೆಸಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಮೊಹಮ್ಮದ್ ಹ್ಯಾರಿಸ್ ಅವರ ನೇತೃತ್ವದಲ್ಲಿ ಮಲ್ಲೇಶ್ವರಂ ಗೋಕಾಕ್ ಉದ್ಯಾನವನದಲ್ಲಿ ಸೇರಿ ಅಲ್ಲಿಂದ ಬಿಜೆಪಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲಲು ಹೊರಟಾಗ ಪೊಲೀಸರು ಮಾರ್ಗ ಮಧ್ಯದಲ್ಲಿ ತಡೆದರು.ಮಾರ್ಗ ಮಧ್ಯ ತಡೆದರೂ ಮುನ್ನಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.ಕೇಂದ್ರ ದಿಂದ ರಾಜ್ಯಕ್ಕೆ ಅಕ್ಕಿ ಕೊಡಿಸುವಲ್ಲಿ ಬಿಜೆಪಿ ಸಂಸದರು ವಿಫಲರಾಗಿದ್ದಾರೆ.ಮೆರವಣಿಗೆಗೆ ಮುನ್ನ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಮೊಹಮ್ಮದ್ ಹ್ಯಾರಿಸ್ ಬಡವರಿಗೆ ನೀಡುವ ಅಕ್ಕಿಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.ಕೇಂದ್ರ ದಿಂದ ರಾಜ್ಯಕ್ಕೆ ಅಕ್ಕಿ ಕೊಡಿಸುವಲ್ಲಿ ಬಿಜೆಪಿ ಸಂಸದರು ವಿಫಲರಾಗಿದ್ದು,ಬಡವರಿಗೆ ನೀಡುವ ಅಕ್ಕಿಯಿಂದಲೂ ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ ಎಂದು ದೂರಿದರು.ದೇಶದ ಎಲ್ಲಾ ಜನರನ್ನ ಒಂದೇ ತರ ನೋಡಬೇಕು,ಕೇಂದ್ರ ಸರ್ಕಾರ ಬಿಜೆಪಿ ಆಡಳಿತದ ರಾಜ್ಯಕ್ಕಲ್ಲ ಎಂದರು.ಬಿಜೆಪಿಗೆ ವೋಟ್ ಹಾಕಿದವರಿಗೂ ನಮ್ಮ ಸರ್ಕಾರ ಅಕ್ಕಿ ಕೊಡಲಿದೆ.ನಾವೇನಾದ್ರೂ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಅಂತ ಅಕ್ಕಿ ಕೊಡಲ್ಲ ಎನ್ನುತ್ತಿದ್ದೇವಾ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕದ ೨೫ ಸಂಸದರ ಮುಖವಾಡಗಳನ್ನ ಧರಿಸಿದ ಕಾರ್ಯಕರ್ತರು ಬಿಜೆಪಿ ಹಾಗೂ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು.