ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಕಲಬುರಗಿ,ಮೇ.10-ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಬರುವ ಅಯ್ಯರವಾಡಿ ಗೋಲಾ ಚೌಕ್‍ನಲ್ಲಿ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದೆ.
ಮಹಾನಗರ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಜ್ಮಲ್ ಗೋಲಾ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಅಜ್ಮಲ್ ಗೋಲಾ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ.