ಬಿಜೆಪಿ ಕಾನೂನು ಪ್ರಕೋಷ್ಠ ವಿಶೇಷ ಸಭೆ

ಬೀದರ: ನ.6:ಬಿಜೆಪಿ ಕಾನೂನು ಪ್ರಕೋಷ್ಠ ವಿಶೇಷ ಸಭೆ ಇಲ್ಲಿಯ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆಯಿತು. ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಅನೇಕ ಹಿರಿಯ ವಕೀಲರನ್ನು ಸನ್ಮಾನಿಸಲಾಯಿತು.ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಎಸ್.ಸಿ. ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಯಕುಮಾರ ಕಾಂಗೆ, ಪಕ್ಷದ ಕಾನೂನು ಪ್ರಕೋಷ್ಠ ರಾಜ್ಯ ಘಟಕದ ಸಂಚಾಲಕ ಎಸ್.ಎಸ್. ಮಿಟ್ಟಲಕೋಡ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಕಲಬುರ್ಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕುಮಾರ ಮಾನೂರೆ, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಪಾಟೀಲ, ಮನ್ಮಥ ಕಾಡವಾದ, ಅಶೋಕ ಹೊಕ್ರಾಣೆ ಇದ್ದರು.