ಬಿಜೆಪಿ ಕಾರ್ಯಕರ್ತರ ಹತ್ಯೆ ನಡ್ಡಾ ಆಕ್ರೋಶ

ನಳಂದ,ಅ. ೩೦- ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಬಿಜೆಪಿ ಯುವ ಘಟಕದ ಮೂವರು ಕಾರ್ಯಕರ್ತರ ಹತ್ಯೆ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದಿಲ್ಲಿ ಗುಡುಗಿದ್ದಾರೆ.

ಯುವ ಕಾರ್ಯಕರ್ತರನ್ನು ಹತ್ಯೆ ಖಂಡನೀಯ ಎಂದು ಹೇಳಿರುವ ಅವರು,ಪಕ್ಷದ ಕಾರ್ಯಕರ್ತರ ಸಾವು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದು ಬರುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಬಿಹಾರದ ವಿಧಾನಸಭೆ ಎರಡನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ನಳಂದಾ ದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರ ಹತ್ಯೆಯ ಹಿಂದೆ ಉಗ್ರರ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಆಮೇಲೆ ಜಮ್ಮು-ಕಾಶ್ಮೀರದ ಭಾರತೀಯ ಜನತಾ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇರ್ ರಶೀದ್ ಬೇಗ್, ಉಮೇರ್ ಅಜಾಮ್,ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಹಿಂದೆ ಭಯೋತ್ಪಾದಕರ ಕೃತ್ಯ ಇದೆಯೆಂದು ಜಮ್ಮು-ಕಾಶ್ಮೀರದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫೀದಾ ಹುಸೈನ್ ಮಾಡಿದ್ದಾರೆ ಎಂದು ದೂರಿದ್ದರು.

ಬಿಹಾರ ವಿಧಾನಸಭೆಯ ಪ್ರಚಾರದಲ್ಲಿ ನಿರತರಾಗಿರುವ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬಗ್ಗೆ ಪ್ರತಿಕ್ರಿಯಿಸಿ ಜಮ್ಮು-ಕಾಶ್ಮೀರದಲ್ಲಿ ಪಕ್ಷದ ಯುವ ಘಟಕದ ಕಾರ್ಯಕರ್ತರನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕಾರ್ಯಕರ್ತರ ಸಾವಿಗೆ ತಕ್ಕಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಭಯೋತ್ಪಾದಕರ ವಿರುದ್ಧ ಗುಡುಗಿದ್ದಾರೆ.

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ ಸಾಲಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಹತ್ಯೆ ಸೇರ್ಪಡೆಯಾಗಿದೆ.

ಜಮ್ಮು-ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವೀಂದ್ರರ್ ರೈನಾ ಅವರು ಕೂಡ ಪಕ್ಷದ ಕಾರ್ಯಕರ್ತರ ಅಮಾನುಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದು ಉಗ್ರರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಳೆದ ಜುಲೈನಲ್ಲಿ ಕಾಂಗ್ರೆಸ್‌ನ ಸರಪಂಚ ಅಜಯ್ ಪಂಡಿತ್ ಮತ್ತು ಬಿಜೆಪಿಯ ನಾಯಕ ವಾಸೀಂ ಬಾರಿ ಹಾಗೂ ಆತನ ಸಹೋದರರನ್ನು ಬಾರಾಮುಲ್ಲಾದಲ್ಲಿ ಮಾಡಲಾಗಿತ್ತು.