ಬಿಜೆಪಿ ಕೋರ್ ಕಮಿಟಿ ಸಭೆ : ಪಕ್ಷ, ನಾಯಕರ ವಿರುದ್ಧ ಹೇಳಿಕೆ ನೀಡುವವರ ವಿರುದ್ದ ಶಿಸ್ತುಕ್ರಮದ ಬಗ್ಗೆ ಚರ್ಚೆ?*

ಶಿವಮೊಗ್ಗ.ಜ. ೦೩: ನಗರದ ಹೊರವಲಯ ಸಾಗರ ರಸ್ತೆಯ ಹೋಟೆಲ್ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಬಿಜೆಪಿ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಭಾನುವಾರ ಪೆಸೆಟ್ ಕಾಲೇಜ್ ನಲ್ಲಿ ನಡೆಯಲಿರುವ ವಿಶೇಷ ಸಭೆಯಲ್ಲಿ ಮಂಡಿಸಿ ನಿರ್ಣಯ ಅಂಗೀಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಲವ್ ಜಿಹಾದ್, ತಾಪಂ – ಜಿಪಂ ಚುನಾವಣೆ, ಪಕ್ಷಕ್ಕೆ ಇರಿಸು ಮುರಿಸು ಆಗುವಂತಹ ಹೇಳಿಕೆ ನೀಡುವವರನ್ನ ನಿಯಂತ್ರಿಸುವ ಕುರಿತು ಸಭೆಯಲ್ಲಿ ವಿಶೇಷ ಚರ್ಚೆ ನಡೆದಿದೆ ಎನ್ನಲಾಗಿದೆ.
ಲವ್ ಜಿಹಾದ್ ಜಾರಿಗೆ ತಂದರೆ ಅದರ ಸಾಧಕ-ಬಾಧಕ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ.
ವಿಶೇಷ ಚರ್ಚೆ: ಪಕ್ಷ ಹಾಗೂ ನಾಯಕರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನ ಕೆಲವರು ನೀಡುತ್ತಿರುವ ಕುರಿತಂತೆ ಸಭೆಯಲ್ಲಿ ವಿಶೇಷ ಚರ್ಚೆ ನಡೆದಿದೆ ಎನ್ನಲಾಗಿದೆ.
ಇಂತಹ ಹೇಳಿಕೆ ನೀಡುವವರ ವಿರುದ್ದ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.