ಬಿಜೆಪಿ ಜತೆ ಮೈತ್ರಿ ತಪ್ಪೇನು

Chief Minister H D Kumaraswamy interview in Bengaluru on Monday 27th August 2018. Photo by Janardhan BK

ಚೆನ್ನಪಟ್ಟಣ,ನ.೨೦- ಈ ಹಿಂದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ೨೦ ತಿಂಗಳು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮತ್ತೆ ಮೈತ್ರಿ ಮಾಡಿಕೊಂಡರೆ ತಪ್ಪೇನಿದೆ ಎಂದಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ಆದರೆ, ಈ ಬಾರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಜೆಡಿಎಸ್‌ಗೆ ಅವಕಾಶವಿಲ್ಲದಿದ್ದರೂ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿಯೊಂದಿಗೆ ಮಾಡಿಕೊಂಡಿರುವ ಮೈತ್ರಿಯನ್ನು ತಮ್ಮದೇ ಆದ ರೀತಿಯಲ್ಲಿ ಸಮರ್ಥಿಸಿದ್ದಾರೆ.
ಚೆನ್ನಪಟ್ಟಣದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮಾಡಿಕೊಂಡಿದ್ದ ಮೈತ್ರಿಯನ್ನು ಸಮರ್ಥಿಸಿಕೊಂಡಿರುವ ಕುಮಾರಸ್ವಾಮಿ ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ, ನವಲಗುಂದದಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವುದನ್ನು ಉಲ್ಲೇಖಿಸಿರುವ ಅವರು, ಸ್ಥಳಿಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷಗಳ ಹೊಂದಾಣಿಕೆ ಸ್ಥಳೀಯ ನಾಯಕರುಗಳಿಗೆ ಬಿಟ್ಟ ವಿಚಾರ ಎಂದಿದ್ದಾರೆ.
ಬಿಜೆಪಿಯೊಂದಿಗಿನ ಮೈತ್ರಿ ಸಮರ್ಥಿಸಿಕೊಂಡಿದ್ದರೂ ಸಹ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಜೆಡಿಎಸ್‌ಗೆ ಮೃಧು ಧೋರಣೆ ಇದೆ ಎಂದು ಭಾವಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಯಾವುದೇ ಪ್ರಾಧಿಕಾರ ರಚನೆಯಿಂದ ನಿರ್ದಿಷ್ಟ ಸಮುದಾಯದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಅಲ್ಲಗಳೆದಿರುವ ಕುಮಾರಸ್ವಾಮಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯಾದ ನಂತರ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಈಗಾಗಲೇ ಕೆಲವರಿಂದ ಒತ್ತಡ ಹೆಚ್ಚಾಗಿದೆ. ಆದರೆ, ಇದರಲ್ಲಿ ನನ್ನ ಪಾತ್ರವಿರುವುದಿಲ್ಲ. ಎಲ್ಲ ಸಮುದಾಯಗಳಲ್ಲಿರುವ ಬಡವರ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.