ಬಿಜೆಪಿ ಜಾತಿಗಳ ನಡುವೆ ವಿಷಬೀಜ ಬಿತ್ತಿ ಯುವಕರನ್ನು ದಾರಿ ತಪ್ಪಿಸುತ್ತಿದೆ – ದದ್ದಲ್

ರಾಯಚೂರು, ಜು.೧೭- ಬಿಜೆಪಿ ಪಕ್ಷ ಕೋಮುಗಲಭೆಗಳನ್ನು ಸೃಷ್ಟಿಸಿ ಜಾತಿಗಳ ನಡುವೆ ವಿಷಬೀಜ ಬಿತ್ತಿ ಯುವಕರನ್ನು ದಾರಿ ತಪ್ಪಿಸುವಂತ ಕೆಲಸ ಮಾಡುತ್ತಿದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಅವರಿಂದು ನಗರದ ಐಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪದಾಧಿಕಾರಿಗಳ ನೇಮಕ ನೇಮಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇವತ್ತು ಜಾತಿ ಜಾತಿಗಳ ನಡುವೆ ವಿಷಬೀಜವನ್ನು ಬಿತ್ತಿ ಯುವಕರನ್ನು ದಾರಿ ತಪ್ಪಿಸುವಂತ ಕೆಲಸ ಬಿಜೆಪಿ ಸರಕಾರ ಮಾಡುತ್ತಿದೆ ಎಂದರು.
ಬಿಜೆಪಿ ಪಕ್ಷ ಯಾವ ರಾಜ್ಯದಲ್ಲಿ ಕೂಡ ಬಹುಮತ ಪಡೆದಿಲ್ಲ.ಅನ್ಯ ಮಾರ್ಗಗಳಿಂದ ಸರಕಾರವನ್ನು ರಚಿಸುತ್ತಿದೆ.ರಾಜ್ಯದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲುಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.ನನ್ನನ್ನು ಶಾಸಕನಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಆಗಳಿರುಳು ಕೆಲಸ ಮಾಡಿ ನನ್ನನ್ನು ಆಯ್ಕೆ ಮಾಡಿದ್ದೀರಿ ಈ ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡುತ್ತಿದ್ದೆ ಎಂದರು.
ಕೆ ಶಾಂತಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಇವತ್ತು ಕೆಲವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.ಮುಖಂಡರ ಜನಪ್ರತಿನಿಧಿಗಳನ್ನು ಗುರುತಿಸಿ ಅವರ ಮನಸ್ಸನ್ನು ಶಾಸಕ ಬಸನಗೌಡ ದದ್ದಲ್ ಅವರು ಗೆದ್ದಿದ್ದಾರೆ ಎಂದರು.
ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಕೇವಲ ಮೂರ್ನಾಲ್ಕು ಸಾವಿರ ಮತಗಳಿಂದ ಅಭ್ಯರ್ಥಿಗಳು ಗೆದ್ದಿದ್ದಾರೆ ಆದರೆ ಬಸನಗೌಡ ದದ್ದಲ್ ಅವರು ಮಾತ್ರ ೧೧ ಸಾವಿರ ಮತಗಳಿಂದ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.ಇನ್ನೊಂದು ಇತಿಹಾಸವನ್ನು ಮುರಿಯಬೇಕಿದೆ.ಯಾರು ಕೂಡ ಗ್ರಾಮೀಣ ಕ್ಷೇತ್ರದಲ್ಲಿ ಒಂದು ಸಲ ಗೆದ್ದ ನಂತರ ೨ನೇ ಬಾರಿ ಶಾಸಕರಾಗಿಲ್ಲ.ಮುಂಬರುವ ವಿಧಾನಸಭಾ ಚನಾವಣೆಯಲ್ಲಿ ಮತ್ತೆ ಬಸನಗೌಡ ದದ್ದಲ್ ಅವರನ್ನು ಗೆಲ್ಲಿಸಿ ಇತಿಹಾಸ ಸೃಷ್ಟಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸಾಜಿದ್ ಸಮೀರ್,ಬಿ.ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.