ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಎಫ್ ಐ ಆರ್

ಕಲಬುರಗಿ,ಏ 4: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಲಬುರಗಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೆ ಜೇವರ್ಗಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಜಿಲ್ಲಾಧ್ಯಕ್ಷರ ಹೆಸರಲ್ಲಿ ಕ್ರಿಕೆಟ್ ಟೂರ್ನಮೆಂಟ್‍ಆಯೋಜಿಸಲಾಗಿತ್ತು.ಶಿವರಾಜ್ ಪಾಟೀಲ್ ರದ್ದೇವಾಡಗಿ ಜೇವರ್ಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.ಜೇವರ್ಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.