ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ

ಬೆಂಗಳೂರು, ಆ.21-ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಮುಖಂಡರಾದ ರಾಜಣ್ಣ, ಆರ್ಯ ಶ್ರೀನಿವಾಸ್, ಶಿವಮಾದಯ್ಯ, ಹನುಮಂತಯ್ಯ, ಚಿಕ್ಕರಾಜು, ಜೆಡಿಎಸ್ ಮುಖಂಡರಾದ ಉಮಾಶಂಕರ್, ರಘು, ಸತೀಶ್ ಮತ್ತಿತರರು ತಮ್ಮ ಅಪಾರ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಜ್ಯಸಭೆ ಸದಸ್ಯ, ಸಿಡಬ್ಲ್ಯೂಸಿ ಸದಸ್ಯ ನಾಸೀರ್ ಹುಸೈನ್, ಆನೇಕಲ್ ಶಾಸಕ ಶಿವಣ್ಣ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ನೆಲಮಂಗಲ ಶಾಸಕ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.