ಬಿಜೆಪಿ-ಜೆಡಿಎಸ್ ಮೈತ್ರಿಗೆ 28 ಸ್ಥಾನ: ನಿಖಿಲ್ ವಿಶ್ವಾಸ

ಕಲಬುರಗಿ,ಜ 29: ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಸಾಧನೆಗಳ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಸಾಧನೆಗಳನ್ನು ನೋಡಿ, ಪರಾಮರ್ಶಿಸಿದ ಬಳಿಕವೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಮೋದಿಯವರ ಕೈ ಬಲಪಡಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಹಾಗಾಗಿ, ಈ ನಿಟ್ಟಿನಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.