
ದೇವದುರ್ಗ,ಏ.೧೫- ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುವ ಮುನ್ನವೇ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಭರ್ಜರಿ ಮತಬೇಟೆಗೆ ಮುಂದಾಗಿದ್ದು ನಿತ್ಯ ಹತ್ತಾರು ಹಳ್ಳಿಗಳಿಗೆ ಸುತ್ತಾಡುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗದ ಕಾರಣ ಕೈ ಕಾರ್ಯಕರ್ತರು ಮೌನಕ್ಕೆ ಜಾರಿದ್ದಾರೆ.
ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕಗೆ ಟಿಕೆಟ್ ಘೋಷಣೆಯಾಗಿದ್ದು, ನಿತ್ಯಹತ್ತಾರು ಹಳ್ಳಿಗೆಸುತ್ತಿ ಪ್ರಚಾರ ಮಾಡುತ್ತಿದ್ದಾರೆ. ಕಮಲ ಕಾರ್ಯಕರ್ತರು ಬೃಹತ್ ಹಾರಹಾಕುವ ಜತೆಗೆ ರ್‍ಯಾಲಿ ಮಾಡುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಅಭ್ಯರ್ಥಿ ಕರೆಮ್ಮ ಜಿ.ನಾಯಕ ಕೂಡ ಹತ್ತಾರು ಹಳ್ಳಿಗೆ ಸುತ್ತಾಡಿ ಪ್ರಚಾರ ಮಾಡುತ್ತಿದ್ದಾರೆ. ಮಹಿಳಾ ಮತದಾರರನ್ನು ಟಾರ್ಗೇಟ್ ಮಾಡಿಕೊಂಡು ಉಡಿ ತುಂಬುವುದು, ಆರತಿ ಬೆಳಗುವ ಸಂಪ್ರದಾಯಕ್ಕೆ ಮೊರೆಹೋಗಿದ್ದಾರೆ.
ಹಲವು ಗ್ರಾಮಗಳಲ್ಲಿ ಮಹಿಳೆಯರು ಹೊಸಸೀರೆ, ತೆಂಗಿನಕಾಯಿ, ಅರಿಸಿನ ಕುಂಕಮ ನೀಡುವ ಜತೆಗೆ ಧನಸಹಾಯ ಮಾಡುತ್ತಿದ್ದಾರೆ. ಶಾಸಕ ಕೆ.ಶಿವನಗೌಡ ನಾಯಕಗೆ ಕೂಡ ಕಾರ್ಯಕರ್ತರು ಸನ್ಮಾನಿಸಿ ಉಡುಗೊರೆ ನೀಡುತ್ತಿದ್ದಾರೆ. ಕೆಪಿಸಿಸಿ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿ ಶ್ರೀದೇವಿ ನಾಯಕ್ ಹಾಗೂ ಎ.ರಾಜಶೇಖರ ನಾಯಕ ಅಲ್ಲಲ್ಲಿ ಏಕಾಂಗಿಯಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಆದರೆ, ಟಿಕೆಟ್ ಯಾರಿಗೆ ಸಿಗಲಿದೆ ಎನ್ನವುದು ಕನ್‌ಫಾರಂ ಆಗಿಲ್ಲ. ಹೀಗಾಗಿ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ.
ಮಾಜಿ ಸಂಸದ ಬಿ.ವಿ.ನಾಯಕ ನೇತೃತ್ವದಲ್ಲಿ ವಿ.ಎಂ.ಮೇಟಿ, ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇತ್ತೀಚೆಗೆ ಬೇಟಿ ಮಾಡಿದ್ದು ಇದು ಟಿಕೆಟ್ ಗೊಂದಲಕ್ಕೆ ಕಾರಣವಾಗಿದೆ. ಎನ್ನುವ ಸುದ್ದಿ ಕೆಳಿಬರುತ್ತಿದೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆಯಿದೆ. ಪಕ್ಷೇತರವಾಗಿ ಸ್ಪರ್ಧೆಸುವ ಗಟ್ಟಿನಾಯಕರು ಯಾರೂ ಕಾಣಿಸುತ್ತಿಲ್ಲ.
ದಿ.ಎ.ವೆಂಕಟೇಶ ನಾಯಕ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದರೆ ಭಂಡಾಯದ ಬಾವುಟ ಹಾರಾಡುವ ಎಲ್ಲ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ಅಬ್ಬರದ ಪ್ರಚಾರದಲ್ಲಿ ಇದ್ದರೆ ಕಾಂಗ್ರೆಸ್ ಪಕ್ಷದಲ್ಲಿ ಅಬ್ಬರದ ಪ್ರಚಾರ ಕಾಣುತ್ತಿಲ್ಲ. ಇದರಿಂದಾಗಿ ಕಾರ್ಯಕರ್ತರಲ್ಲಿ ಸ್ವಲ್ಪರ ಮೇಟಿಗೆ ಗೊಂದಲ ಮೂಡಿದೆ.