ಬಿಜೆಪಿ ಪಕ್ಷಕ್ಕಾಗಿ ದುಡಿಯಿರಿ-ಎಂಎಲ್‌ಸಿ ಶಂಕರಪ್ಪ

ಲಿಂಗಸೂಗೂರು,ಮಾ.೦೬-ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಲಿಂಗಸೂಗೂರು ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಅವರ ಪರವಾಗಿ,ಮುಖ್ಯವಾಗಿ ಪಕ್ಷದ ಪರವಾಗಿ ಕೆಲಸ ಮಾಡಬೇಕೆಂದು ಎಂ ಎಲ್ ಸಿ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಶಂಕ್ರಪ್ಪ ಅವರು ಕ್ಷೇತ್ರದ ಬಿಜೆಪಿ ಮುಖಂಡರಿಗೆ ಸಭೆಯಲ್ಲಿ ತಿಳಿಸಿದರು.
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಕ್ಷೇತ್ರದ ಬಿಜೆಪಿ ಪಕ್ಷದಲ್ಲಿ ಹಲವಾರು ಸಭೆಗಳು ನಡಿಯುತ್ತಿದೂ ಈ ಹಿನ್ನಲೆಯಲ್ಲಿ ನಿನ್ನೆ ಕೂಡ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿದೆ, ಸಭೆಯಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು, ಬಿಜೆಪಿ ಮಾಜಿ ಶಾಸಕರು, ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ, ನಮ್ಮಲ್ಲಿ ಯಾವುದೇ ತರಹ ಬಿನ್ನಾಭಿಪ್ರಾಯವಿಲ್ಲ ನಮ್ಮ ಪಕ್ಷದ ಎಲ್ಲಾ ಮುಖಂಡರ ಸಲಹೆ, ಹಾಗೂ ಕ್ಷೇತ್ರದ ಕಾರ್ಯಕರ್ತರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಪರವಾಗಿ ಪ್ರಚಾರವನ್ನು ಮಾಡುತ್ತಿದ್ದೇವೆ,ಎಲ್ಲಾ ಕಡೆಗೂ ಜನರಿಂದ ಒಳ್ಳೆ ಅಭಿಪ್ರಾಯ ಬರುತ್ತಿದ್ದು ಈ ಬಾರಿ ಬಿಜೆಪಿ ಪಕ್ಷ ಗೆಲುವಿನ ನಗೆ ಬಿರುತ್ತದೆ ಎಂದು ಸಭೆಯಲ್ಲಿ ಲಿಂಗಸೂಗೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ. ಸುದರ್ಶನ್ ಸಜ್ಜನ್ ತಿಳಿಸಿದರು.
ಬಿಜೆಪಿ ಪಕ್ಷದಲ್ಲಿ ಕೇಂದ್ರ ಹಾಗೂ ರಾಜ್ಯದ ಮುಖಂಡರ ಸಮ್ಮುಖದಲ್ಲಿ ಅಭ್ಯರ್ಥಿಯ ತೀರ್ಮಾನ ಅಂತಿಮವಾಗಲಿದೆ, ಪಕ್ಷದಿಂದ ಯಾರಿಗೆ ಟಿಕೆಟ್ ನೀಡುತ್ತಾರೆ ಅವರಿಗೆ ಬೆಂಬಲವಿದೆ, ಎಲ್ಲರೂ ಒಟ್ಟಿಗೆ ಸೇರಿಕೊಂಡು ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಕಾರ್ಯ ಮಾಡುತ್ತೇವೆ, ನಮ್ಮ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಹಲವಾರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ, ಇನ್ನೂ ಅನೇಕ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ, ಪಕ್ಷ ಬಲಪಡಿಸಲು ಪಕ್ಷದ ಎಲ್ಲರ ಸಹಕಾರ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ತಿಳಿಸಿದರು.