ಬಿಜೆಪಿ ಪಕ್ಷದಿಂದ ಬೂತ್ ಮಟ್ಟದ ಸಭೆ

ಕೋಲಾರ,ಜ,೧೯-ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಅಪಾರ ಸಂಖ್ಯೆಯಲ್ಲಿ ಯುವಕರು ಪಕ್ಷವನ್ನು ಬೆಂಬಲಿಸುತ್ತಾ ಇದ್ದಾರೆ ಎಂದು ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ತಾಲೂಕಿನಲ್ಲಿ ಬಿಜೆಪಿ ಪಕ್ಷದಿಂದ ವಿವಿಧ ಗ್ರಾಮಗಳಲ್ಲಿ ಬೂತ್ ಮಟ್ಟದ ಸಭೆಗಳಲ್ಲಿ ಅವರು ಮಾತನಾಡಿ, ಕೋಲಾರ ವಿಧಾನಸಭಾ ಕ್ಷೇತ್ರದ ೨೮೪ ಬೂತ್ ಗಳಲ್ಲಿ ಕೇಂದ್ರದ ನರೇಂದ್ರ ಮೋದಿ, ರಾಜ್ಯದ ಬಸವರಾಜ್ ಬೊಮ್ಮಯಿ ಹಾಗೂ ಜಿಲ್ಲೆಯ ಸಂಸದರ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಸನ್ನದ್ಧವಾಗಿದ್ದಾರೆ ಎಂದರು.
ಜಿಲ್ಲೆಯಲ್ಲಿ ಬೂತ್ ಮಟ್ಟದ ಶಕ್ತಿ ಕೇಂದ್ರದ ಪ್ರಮುಖರ ಸಭೆ ಜ.೧೯ ರಂದು ನಗರದ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮುಖಂಡರು ಉಸ್ತುವಾರಿಗಳು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಬಿಜೆಪಿ ನಗರ ಅಧ್ಯಕ್ಷ ತಿಮ್ಮರಾಯಪ್ಪ, ಮುಖಂಡರಾದ ಮಮತಮ್ಮ, ಗೋವಿಂದರಾಜು, ವೈಲೇಶ್, ಶಶಿಕುಮಾರ್, ಕುಂಬಾರಹಳ್ಳಿ ಸುರೇಶ್, ಜಗದೀಶ್, ರವಿಕುಮಾರ್, ಮಂಜುನಾಥ್ ಇದ್ದರು.