ಬಿಜೆಪಿ ಪಕ್ಷದ ತಳಮಟ್ಟದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ: ನಿಂಗದಳ್ಳಿ

ಅಫಜಲಪುರ: ನ.11:ತಾಲೂಕಿನಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಬಿ.ಜೆ.ಪಿ ಪಕ್ಷದ ತಳಮಟ್ಟದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಅಲ್ಲದೇ ನಾನೊಬ್ಬ ಪದವೀಧರನಾಗಿದ್ದು, ಈ ಬಾರಿ ಈಶಾನ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಬಿ.ಜೆ.ಪಿ ಮುಖಂಡ ಮಲ್ಲಿಕಾರ್ಜುನ ನಿಂಗದಳ್ಳಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷದ ಎರಡು ಅವಧಿಗೆ ತಾಲೂಕು ಅಧ್ಯಕ್ಷ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನದ ಪ್ರಮುಖನಾಗಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ.

ನಾನು ಪದವೀಧರನಾಗಿರುವುದರಿಂದ ಮತ್ತು ಪದವೀಧರರ ಸಮಸ್ಯೆ ಬಲ್ಲವನಾಗಿದ್ದು,ಪಕ್ಷದ ಹಿರಿಯರು ನನಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಬಿಜೆಪಿ ನಗರ ಘಟಕದ ಅಧ್ಯಕ್ಷ ಶರಣಬಸಪ್ಪ ಪದಕಿ ಹಾಗೂ ಭೀಮರಾಯ ಕಲಶೆಟ್ಟಿ ಮಾತನಾಡಿ, ಅನೇಕ ವರ್ಷಗಳಿಂದ ತಾಲೂಕಿನಲ್ಲಿ ಬಿಜೆಪಿ ಕಟ್ಟಿ ಬೆಳೆಸುವುದರಲ್ಲಿ ಮಲ್ಲಿಕಾರ್ಜುನ ನಿಂಗದಳ್ಳಿ ಪಾತ್ರ ದೊಡ್ಡದಿದೆ. ಒಬ್ಬ ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ, ಶಿಸ್ತು ಬದ್ಧವಾಗಿ ಪಕ್ಷದಲ್ಲಿ ನಡೆದುಕೊಂಡಿದ್ದಾರೆ. ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುವ ವ್ಯಕ್ತಿ ನಿಂಗದಳ್ಳಿ ಅವರಲ್ಲಿದೆ. ಹೀಗಾಗಿ ಇವರಿಗೆ ಈ ಬಾರಿ ಟಿಕೆಟ್ ನೀಡಬೇಕೆಂದು ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಮಾಲಗತ್ತಿ, ಶರಣು ದಿವಾಣಜಿ ಸೇರಿದಂತೆ ಅನೇಕರಿದ್ದರು.


ಮಲ್ಲಿಕಾರ್ಜುನ ನಿಂಗದಳ್ಳಿ ಅವರು ಬಿಜೆಪಿ ಪಕ್ಷದಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ಕೂಡ ಇವರು ಪಕ್ಷವನ್ನು ಬಿಟ್ಟು ಬೇರೊಂದು ಪಕ್ಷಕ್ಕೆ ಹೋಗಿರುವುದಿಲ್ಲ. ಪಕ್ಷದಲ್ಲಿ ಯಾವುದೇ ಕೆಲಸಗಳು ನೀಡಿದರೂ ಕೂಡ ಬಹಳ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಾರೆ. ಆದ ಕಾರಣ ಇಂತಹ ಒಬ್ಬ ನಿಷ್ಠಾವಂತ ಕಾರ್ಯಕರ್ತನಿಗೆ ಈ ಬಾರಿ ಪದವೀಧರರ ಕ್ಷೇತ್ರದಿಂದ ಟಿಕೆಟ್ ನೀಡಬೇಕು.

-ವಿಜಯಕುಮಾರ ವರ್ಧಮಾನ, ಬಿಜೆಪಿ ಮುಖಂಡರು ಅಫಜಲಪುರ.