ಬಿಜೆಪಿ ಶೂನ್ಯ ಕೊಡುಗೆ: ವಠಾರ ಆರೋಪ

ಕಲಬುರಗಿ: ಜ.20:ಲಂಬಾಣಿ ಗ್ರಾಮಗಳನ್ನು ಕಂದಾಯ ಗ್ರಾಮ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ.ಈ ಯೋಜನೆಯನ್ನು ಕಾಂಗ್ರೆಸ್ ಮಾಡಿದೆ. ಆದರೆ ಬಿಜೆಪಿಗರು ಕಾಂಗ್ರೆಸ್ ಮಾಡಿದ ಕೆಲಸವನ್ನು ತಾವು ಮಾಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಯುವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ(ಕೆರಿಬೋಸಗಾ) ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಲಂಬಾಣಿ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ.ಅಲ್ಲದೇ ಪರಿಶಿಷ್ಟ ಜಾತಿಗೆ ವಿಶೇಷ ಕೊಡುಗೆ ನೀಡಿರುವುದು ನಿಜಕ್ಕೂ ಕಾಂಗ್ರೆಸ್ ಪಕ್ಷದ ಕೀರ್ತಿಯನ್ನು ಹೆಚ್ಚಿಸುತ್ತದೆ ಎಂದರು. ಲಂಬಾಣಿ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡದೆ ಬಿಟ್ಟಿ ಪ್ರಚಾರ ಬಿಜೆಪಿ ಪಡೆಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಇದ್ದಾಗ ಸರಕಾರದ ಪರವಾಗಿ ಸೇವಲಾಲ ಜಯಂತಿ ಮಾಡುವಂತಹ ವ್ಯವಸ್ಥೆ ಜಾರಿಗೊಳಿಸಿರುವುದು ನಿಜಕ್ಕೂ ಶ್ಲಾಘನೀಯ.ಆದರೆ ಬಿಜೆಪಿ ಮಾತ್ರ ಯಾವುದೇ ಕೊಡುಗೆ ನೀಡದೆ ಬಿಟ್ಟಿ ಪ್ರಚಾರ ಪಡೆಯುತ್ತಿದ್ದೆ ಎಂದು ಅವರು ಆರೋಪಿಸಿದರು.