ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ನೇಮಕ


ಬೆಂಗಳೂರು,ಜು.೨೧- ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿಯಾಗಿ ಆರ್‌ಎಸ್‌ಎಸ್‌ನ ತುಮಕೂರು ವಿಭಾಗದ ಕಾರ್ಯನಿರ್ವಾಹಕರಾಗಿದ್ದ ರಾಜೇಶ್. ಜಿ.ವಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ಸಿಂಗ್ ಅವರು ರಾಜೇಶ್.ಜಿವಿ ಅವರನ್ನು ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ನೇಮಕ ಮಾಡಿದ್ದಾರೆ.
ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕ ಮಾಡಲಾಗಿದ್ದು, ಈ ಹಿಂದೆ ಸಂಘಟನಾ ಕಾರ್ಯದರ್ಶಿಯಾಗಿದ್ದ ಅರುಣ್‌ಕುಮಾರ್, ಮತ್ತೆ ಆರ್‌ಎಸ್‌ಎಸ್ ಪ್ರಚಾರ ಕಾರ್ಯಕ್ಕೆ ಮರಳಿದ್ದಾರೆ.
ಬಿಜೆಪಿಯಲ್ಲಿ ಸಂಘಟನಾ ಕಾರ್ಯದರ್ಶಿ ಹುದ್ದೆ ಮಹತ್ವದ್ದಾಗಿದ್ದು, ಈ ಹುದ್ದೆಗೆ ಆರ್‌ಎಸ್‌ಎಸ್ ಸೂಚಿಸಿದವರನ್ನೇ ನೇಮಕ ಮಾಡಲಾಗುತ್ತದೆ.