ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಬೀದರ:ಎ.7:ಬಿಜೆಪಿ ಸಂಸ್ಥಾಪನಾ ದಿನದ ಪ್ರಯುಕ್ತ ಬೀದರ್ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಪಕ್ಷದ ಧ್ವಜವನ್ನು ಹಾರಿಸಿ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಶ್ರೀ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಮಾತನಾಡಿ ನಿಸ್ವಾರ್ಥ ಪರಿಶ್ರಮದಿಂದ ಪಕ್ಷವನ್ನು ಕಟ್ಟಿದ ನಮ್ಮ ಎಲ್ಲಾ ಹಿರಿಯ ನಾಯಕರನ್ನು ಕಾರ್ಯಕರ್ತರನ್ನು ಸ್ಮರಿಸೋಣ ಪಕ್ಷವನ್ನು ಮತ್ತಷ್ಟು ಸಂಘಟಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರದ ಬಿಜೆಪಿ ಅಧ್ಯಕ್ಷರಾದ ಹನುಮಂತ ಬುಳ್ಳ ವಿಭಾಗ ಸಂಘಟನಾ ಕಾರ್ಯದರ್ಶಿ ಹಾಗು ಮಂಡಲ ಅಧ್ಯಕ್ಷರು ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರಿದ್ದರು.