ಬಿಜೆಪಿ ಸರ್ಕಾರದ ಆಡಳಿತ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವ

ಲಿಂಗಸುಗೂರು,ಜ.೧೮ -ಪಂಚರತ್ನ ಯಾತ್ರೆ ೨೪ರಂದು ಲಿಂಗಸುಗೂರಿಗೆ ಆಗಮನ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮುಖಂಡರು ಪಂಚರತ್ನ ಯೋಜನೆ ಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಲಿಂಗಸುಗೂರು ಕ್ಷೇತ್ರದ ಜನರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವೀರುಪಾಕ್ಷಿ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಹೆಸರಲ್ಲಿ ಬಿಜೆಪಿ ಸರ್ಕಾರದಲ್ಲಿ ಹಟ್ಟಿ ಚಿನ್ನದಗಣಿ ಕಂಪನಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಾನಪ್ಪ ವಜ್ಜಲ್ ಇವರ ಕಮಿಷನ್ ಹೆಚ್ಚಿಸಲು ಆಧುನೀಕರಣ ಅನುದಾನ ಬಿಡುಗಡೆ ಬಂದ ಅನುದಾನ ಲೂಟಿ ಮಾಡುವ ಗುತ್ತಿಗೆದಾರರಿಗೆ ಹಿಂಬಾಗಿಲಿನಿಂದ ರಾಜಕಾರಣ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರೈತರು ಸಾಲ ಮನ್ನಾ ಮಾಡಿ ರೈತರ ಬಾಳಲ್ಲಿ ಆಶಾಕಿರಣ ವಾಗಿ ಸರ್ಕಾರ ನಡೆಸಿದರು.
ರಾಯಚೂರು ಜಿಲ್ಲೆಗೆ ಪಂಚರತ್ನ ಯಾತ್ರೆ ರಥ ಯಾತ್ರೆ ಲಿಂಗಸುಗೂರು ತಾಲ್ಲೂಕಿನಲ್ಲಿ ಆಗಮಿಸಿ ಜೆಡಿಎಸ್ ಪಕ್ಷದಿಂದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ತಾಲೂಕು ಜನರು ಅಂದಿನ ಸಭೆಯಲ್ಲಿ ಕುಮಾರಸ್ವಾಮಿ ಆಗಮಿಸಿ ಚುನಾವಣೆ ಪ್ರಕ್ರಿಯೆ ಸಂಬಂಧಿಸಿದಂತೆ ಪಂಚರತ್ನ ಯಾತ್ರೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಹಾಲಿ ಶಾಸಕ ಡಿ.ಎಸ್.ಹೂಲಗೇರಿ ಇವರು ಡೊಂಗಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ಈಗಾಗಲೇ ಕ್ಷೇತ್ರದಲ್ಲಿ ಜನರು ಮಾತನಾಡುತ್ತಿದ್ದಾರೆ.
ಇವರ ರಾಜಕಾರಣ ಮಾಜಿ ಶಾಸಕ ಮಾನಪ್ಪ ವಜ್ಜಲ್ ಇವರಿಗೆ ಒತ್ತಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ್, ಆತ್ತನೂರ ತಾಲೂಕು ಅಧ್ಯಕ್ಷ ಬಸವರಾಜ ಮಾಕಾಪುರ, ಜೆಡಿಎಸ್ ಕಾರ್ಯಾಧ್ಯಕ್ಷ ಗೋವಿಂದ ರಾಜ ಅಮ್ಮಾಪುರ, ಜೆಡಿಎಸ್ ಅಭ್ಯರ್ಥಿ ಸಿದ್ದು ವೈ ಬಂಡಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಇಮ್ಮಿತಿಯಾಜ ಪಾಶ, ಸೇರಿದಂತೆ ಇತರರು ಉಪಸ್ಥಿತರಿದ್ದರು.