ಬಿಜೆಪಿ ಸರ್ಕಾರ ತೊಲಗಿಸಿ: ರಾಮಲಿಂಗಾರೆಡ್ಡಿ

ಬೆಂಗಳೂರು, ಏ. ೩೦- ಕರ್ನಾಟಕದ ಭ್ರಷ್ಟ ೪೦% ಬಿಜೆಪಿ ಸರ್ಕಾರ ತೊಲಗಿಸಲು ಜನ ಪಣತೊಡಲೇಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷರಾದ ಶ್ರೀರಾಮಲಿಂಗಾರೆಡ್ಡಿ ರವರು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.
ಈ ಬಾರಿ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ಉತ್ತಮ ಆಡಳಿತ ಸರ್ಕಾರ ರಚಿಸಲು ಜನ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ರವರು ಮತದಾರರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.
ಆದ್ದರಿಂದ ಉತ್ತಮ ಆಡಳಿತ ಜನಪರ ಆಡಳಿತ ನೀಡಲು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವ ಜವಾಬ್ದಾರಿ ಜನರ ಮೇಲಿದೆ ಎಂದು ಬಿಟಿಎಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮಲಿಂಗಾ ರೆಡ್ಡಿ ರವರು ಬಿಟಿಎಂ ವಿಧಾನಸಭಾ ಕ್ಷೇತ್ರದ ಜಕ್ಕಸಂದ್ರದಲ್ಲಿ ಮತದಾರರನ್ನು ಭೇಟಿ ಮಾಡಿ ಮನವಿ ಮಾಡಿದರು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಎಲ್ಲ ಸಮಸ್ಯೆಯನ್ನ ಬಗೆಹರಿಸುತ್ತೇವೆ ಹಾಗೂ ಜನಪರ ಆಡಳಿತ ನೀಡುತ್ತೇವೆ
ಜನರ ನೋವಿಗೆ ಸ್ಪಂದಿಸುತ್ತೇವೆ ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಿ ತರುವುದು ಜನರ ಬಯಕೆಯೂ ಸಹ ಆಗಿದೆ. ಇಡೀ ರಾಜ್ಯದ ಜನತೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲಾ ಗ್ಯಾರೆಂಟಿಗಳನ್ನು ಭರವಸೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರುತ್ತೇವೆ ಎಂದು ಸಹ ಭರವಸೆ ನೀಡಿದರು.
ಬಿಟಿಎಂ ವಿಧಾನಸಭಾ ಕ್ಷೇತ್ರದ ಲಕ್ಷಂದ್ರ ವಾರ್ಡ್ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಮನೋಹರ್ ಮಾಜಿ ಪಾಲಿಕೆ ಸದಸ್ಯರಾದ ಬಿಎಸ್ ಪುಟ್ಟರಾಜು, ಮುನಿರಾಜು, ಚಂದ್ರಪ್ಪ ರೆಡ್ಡಿ, ಸ್ಥಳೀಯ ಮುಖಂಡರಾದ ಲಕ್ಷ್ಮೀ ಚಲಪತಿ ಕಾರ್ಯಕರ್ತರು ಉಪಸ್ಥಿತರಿದ್ದರು