ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ – ಬಳ್ಳಾರಿ


ಬ್ಯಾಡಗಿ,ಜ.11: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೇ ಅಧಿಕಾರಕ್ಕೆ ಬರುವುದು ಖಚಿತವೆಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ತಾಲೂಕಿನ ಮಲ್ಲೂರು ಗ್ರಾಮದ ಶ್ರೀವೀರಭದ್ರೇಶ್ವರ ಸಮುದಾಯ ಭವನ ಕಟ್ಟಡ ಕಾಮಗಾರಿ ನಿರ್ಮಾಣ ಕಾರ್ಯಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಿಂದ ಹಿಡಿದು ಪಟ್ಟಣ ಪ್ರದೇಶಗಳವರೆಗೂ ಜನಪರ ಕಾರ್ಯಕ್ರಮಗಳನ್ನು ನೀಡಿರುವೆ.
ನಾನಾ ಸಮುದಾಯಗಳ ದೇವಸ್ಥಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದ್ದೇನೆ. ಆಯಾ ಸಮುದಾಯಗಳ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಅನುಕೂಲ ಕಲ್ಪಿಸುವ ಮೂಲಕ ತಮ್ಮ ಅನುದಾನವನ್ನು ಸದ್ಬಳಕೆ ಮಾಡಲಾಗಿದೆ ಎಂದರಲ್ಲದೇ, ಕ್ಷೇತ್ರದಲ್ಲಿ ಎಲ್ಲ ವರ್ಗಗಳ ಕಲ್ಯಾಣಕ್ಕಾಗಿ ಅನುದಾನ ಬಳಕೆ ಮಾಡಲಾಗಿದ್ದು, ಹೆಚ್ಚಿನ ಅನುದಾನ ಒದಗಿಸುವ ಮೂಲಕ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಿದ ತೃಪ್ತಿ ತಮಗಿದೆ ಎಂದರು.
ಈ ಸಂದರ್ಭದಲ್ಲಿ ತಾಬಿಜೆಪಿ ಅಧ್ಯಕ್ಷ ಹಾಲೇಶ ಜಾಧವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿರೇಂದ್ರ ಶೆಟ್ಟರ, ಜಾನಪದ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶಂಕ್ರಣ್ಣ ಅಕ್ಕಿ, ಕೇಸಿಸಿ ಬ್ಯಾಂಕ್ ನಿರ್ದೇಶಕ ಪ್ರಕಾಶ ಗಣೇಶಕರ, ಸೋಮಲಿಂಗಪ್ಪ ಕುಲ್ಕರ್ಣಿ, ಜಯಪ್ರಕಾಶಗೌಡ ಪಾಟೀಲ, ವೀರಯ್ಯ ಹಿರೇಮಠ, ಗ್ರಾ.ಪಂ.ಅಧ್ಯಕ್ಷೆ ನೀಲವ್ವ ಕುಲಕರ್ಣಿ, ಉಪಾಧ್ಯಕ್ಷೆ ಮರಿಯವ್ವ ಕಡತಿ, ಸದಸ್ಯರಾದ ನಿಸ್ಸಾರ ಅಹ್ಮದ್ ಕೆಂಗೆನವರ, ಮಹ್ಮದರಪೀಕ ಮುಲ್ಲಾ, ವಿಠಲರಾವ್ ಜಾಧವ, ಇಂಜನೀಯರ್ ಎಚ್.ಡಿ.ಶಾಂತಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.