ಬಿಜೆಪಿ ಸೋತಿದ್ದಕ್ಕೆ ಬೇಜಾರಿಲ್ಲ, ಕಾಂಗ್ರೆಸ್ ಬಂದದ್ದಕ್ಕೆ ಹೆಚ್ಚು ಬೇಸರ: ಸದಾನಂದಗೌಡ

ಚಾಮರಾಜನಗರ, ಜೂ.23:- ನನಗೆ ಬಿಜೆಪಿ ಸೋತದ್ದಕ್ಕೆ ಬೇಜಾರಿಲ್ಲ, ಆದರೆ. ಕಾಂಗ್ರೆಸ್ ಬಂದಿದ್ದಕ್ಕೆ ಹೆಚ್ಚು ಬೇಸರಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಅವರು, ಕರ್ನಾಟಕದ ದುರ್ದೈವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಂತೆಂತಾ ಮಂತ್ರಿಗಳಿದ್ದಾರೆ, ಸರ್ವರ್‍ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎನ್ನುತ್ತಾರೆ ಎಂದು ಕೈ ವಿರುದ್ಧ ಲೇವಡಿ ಮಾಡಿದರು.
ಕುಣಿಯಲಾರದವ ನೆಲ ಡೊಂಕು ಎಂದ ರೀತಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲಎನ್ನುತ್ತಿದ್ದಾರೆ. ಘೋಷಣೆಗೂ ಮುನ್ನ ಕಾಂಗ್ರೆಸ್ ನವರಿಗೆ ಪರಿಜ್ಞಾನ ಇರಲಿಲ್ಲವಾ? ಮುಂದೆ ಯಾವ ರೀತಿ ತೊಂದರೆ ಉಂಟಾಗಬಹುದು ಎಂಬ ಚಿಂತನೆ ಇರಲಿಲ್ಲವಾ? 16 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯಗೆ ಮುಂದಾಲೋಚನೆ ಇರಬೇಕಿತ್ತು, 16 ಬಾರಿ ಬಜೆಟ್ ಮಂಡಿಸಿದರೇ ಗದ್ದೆಯಲ್ಲಿ ಭತ್ತ ಬೆಳೆಯುವುದಿಲ್ಲ ಎಂದು ಕಿಡಿಕಾರಿದರು.
ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ಆ ರೀತಿಚೀಪ್ ಪಾಲಿಟಿಕ್ಸ್‍ನ್ನು ಮುಖಂಡರು, ಕಾರ್ಯಕರ್ತರು ಮಾಡುವುದಿಲ್ಲ, ಕರ್ನಾಟಕದ ಪ್ರತಿಯೊಬ್ಬರಿಗೂ ಅಕ್ಕಿ ಸಿಗಬೇಕೆಂಬುದು ನಾಯಕರ, ಕಾರ್ಯಕರ್ತರ ಆಶಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು.
ಸಿಎಂ-ಡಿಸಿಎಂಗೆ ಸವಾಲ್ ಹಾಕುವ ನಾಯಕ ನೇಮಕ:
ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮಧರ್ಮ. ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.
ಇದೇ ವೇಳೆ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದಲ್ಲಿ ಹೊಂದಾಣಿಕೆ ರಾಜಕರಣ ಯಾರೂ ಮಾಡುವುದಿಲ್ಲ, ಆ ರೀತಿರಾಜಕಾರಣ ಮಾಡಿದ್ದರೇ ಹಲವು ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು, ಆದರೆ ನಾವು ಸೋತರೂ ಪರವಾಗಿಲ್ಲ, ಹೊಂದಾಣಿಕೆರಾಜಕಾರಣ ಮಾಡಲ್ಲಎಂಬುದು ಮುಖಂಡರ, ಪಕ್ಷದ ನಿಲುವಾಗಿದೆ ಎಂದರು.
ಇನ್ನು, ಸೋಲಿನ ಪರಾಮರ್ಶೆಯ ಕಾರ್ಯಕರ್ತರ ಸಭೆಗೆ ಮಾಜಿ ಸಚಿವ ಸೋಮಣ್ಣಗೈರಾಗಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸೋಮಣ್ಣ ತಾನು ಬರುವುದಿಲ್ಲ ಎಂದು ಹೇಳಿದರು, ಸೋಲಿನ ನೋವಿನಿಂದ ಅವರಿನ್ನೂ ಹೊರಬಂದಿಲ್ಲ, ಆದರೆ ಅವರಿಗೆ ಯಾರಾ ಮೇಲೂ ಕೋಪ ಇಲ್ಲಾ ಎಂದರು.
ಅಧಿಕಾರಿಗಳು ಯಾವಾಗ ಬಟ್ಟೆ ಹರ್ಕೊತ್ತಾರೋಗೊತ್ತಿಲ್ಲ:
ಪಂಚ ಗ್ಯಾರಂಟಿ ಘೋಷಣೆ ಮಾಡಿ ಸರ್ಕಾರ ಸಾಕಷ್ಟುಗೊಂದಲವನ್ನು ಸೃಷ್ಟಿ ಮಾಡುತ್ತಿದೆ ಎಂದು ಕೊಳ್ಳೇಗಾಲದ ಮಾಜಿ ಶಾಸಕ ಎನ್.ಮಹೇಶ್ ಆರೋಪಿಸಿದರು.
ಬಿಜೆಪಿ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿಜಾರಿಗಾಗಿ ಕಂಡಿಷನ್ಸ್‍ಗಳನ್ನು ಹಾಕಿ ಗೊಂದಲ ಉಂಟು ಮಾಡಿದ್ದುಐಎಎಸ್ ಅಧಿಕಾರಿಗಳು ತಲೆ ಪರಚಿಕೊಳ್ಳುತ್ತಿದ್ದಾರೆ. ಯಾವಾಗ, ಬಟ್ಟೆ ಹರ್ಕೋತ್ತಾರೋಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.
ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. ಜು.1 ರಿಂದ 15 ಕೆಜಿ ಅಕ್ಕಿ ಕೊಡದಿದ್ದರೇ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಶಕ್ತಿ ಯೋಜನೆ ಎಷ್ಟು ದಿನ ಇರುತ್ತೋಗೊತ್ತಿಲ್ಲ, ಡೀಸೆಲ್‍ಗೂ ಅವರ ಬಳಿ ದುಡ್ಡು ಹೊಂದಿಸಲು ಸಾಧ್ಯವಿಲ್ಲ ಎಂದು ಕೈ ವಿರುದ್ಧ ಲೇವಡಿ ಮಾಡಿದರು.