
ಕೋಲಾರ, ಏ. ೨೮:ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರದಲ್ಲಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಸೋಲಿಸುವ ಮೂಲಕ ಈ ಚುನಾವಣೆಯಲ್ಲಿ ಕಾರ್ಮಿಕರ ಶಕ್ತಿ ತೋರಿಸಬೇಕಾಗಿದೆ ಎಂದು ಸಿಐಟಿಯು ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸಿಐಟಿಯು ಜಿಲ್ಲಾ ಸಮಿತಿಯಿಂದ ಅಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ದುಡಿಯುವ ಜನರ ಹಕ್ಕುಗಳು ಹಾಗೂ ಜೀವನೋಪಾಯ ರಕ್ಷಣೆಗಾಗಿ, ಕಾರ್ಪೊರೇಟ್ ಸಂಸ್ಥೆಗಳ ಪರವಾದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದದ ಕಾರ್ಮಿಕರ ಪ್ರಣಾಳಿಕೆ ತಯಾರಿಸಲಾಗಿದೆ.
ಓ ಪ್ರಣಾಳಿಕೆಯನ್ನು ಜಾರಿ ಮಾಡುವ ಜಾತ್ಯಾತೀತ ಪಕ್ಷಗಳಿಗೆ ಈ ಬಾರಿ ಚುನಾವಣೆಯಲ್ಲಿ ಸಿಐಟಿಯು ಸಂಘಟನೆಯು ತನ್ನ ಬೆಂಬಲವನ್ನು ನೀಡಲಿದೆ ಎಂದರು.ಜಿಲ್ಲೆಯಲ್ಲಿ ಸಿಐಟಿಯು ನೇತೃತ್ವದಲ್ಲಿ ಅನೇಕ ಕಾರ್ಮಿಕರ ಪರವಾದ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿದೆ ಪ್ರಮುಖವಾಗಿ ಕೆಜಿಎಫ್ ಬಿಇಎಂಎಲ್ ಪುನಃ ಪ್ರಾರಂಭಿಸುವುದು, ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಕಾರ್ಮಿಕರ ಪರವಾಗಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ತೀರ್ಮಾನಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರಗಳು ಮುಂದಾಗಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು ಒಟ್ಟಾರೆಯಾಗಿ ಕಾರ್ಮಿಕರ ನೆಮ್ಮದಿ ಬದುಕು ಹಾಗೂ ಶಾಂತಿ ಸಹಬಾಳ್ವೆ ಕಾಪಾಡುವ ಪಕ್ಷಗಳಿಗೆ ಮತ ನೀಡುವಂತೆ ಮನವಿ ಮಾಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ನಿವೃತ್ತ ಬ್ಯಾಂಕ್ ನೌಕರರ ಸಂಘದ ಮುಖಂಡ ಎಚ್.ಬಿ ಕೃಷ್ಣಪ್ಪ ಮಾತನಾಡಿದರು.
ಹಿನ್ನೆಲೆಯಲ್ಲಿ ಕಾರ್ಮಿಕ ವಿರೋಧಿ ಹಾಗೂ ಕೋಮುವಾದಿ ಬಿಜೆಪಿಯನ್ನು ಸೋಲಿಸುವ ನಿಲುವವನ್ನು ತೆಗೆದುಕೊಂಡಿದ್ದೇವೆ. ೨೫ ಅಂಶಗಳ ಈ ಪ್ರಣಾಳಿಕೆಯನ್ನು ಜನರ ಮುಂದೆ ತೆಗೆದುಕೊಂಡು ಹೋಗಿ ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಲು ಕರೆ ನೀಡುತ್ತೇವೆಂದರು.ಸಿಐಟಿಯು ಮುಖಂಡರಾದ ಭೀಮರಾಜ್, ಕೇಶವ ರಾವ್, ಶಿವಾನಂದ್ ಇದ್ದರು.