ಬಿಟ್ ಕಾಯಿನ್ ಹಗರಣ;ತನಿಖೆಗೆ ಎಸ್ ಐ ಟಿ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೩- ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ವಿಧಾನಸೌಧದಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಬಿಜೆಪಿ ಸರ್ಕಾರದ ಬಿಟ್‌ಕಾಯಿನ್ ಹಗರಣದ ಬಗ್ಗೆ ನಾವು ಮಾತನಾಡಿದ್ದೇವು. ಈಗ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದೇವೆ. ಸಿಐಡಿ ಅಡಿಯಲ್ಲಿ ಎಸ್‌ಐಟಿಯನ್ನು ರಚನೆ ಮಾಡಿದ್ದೇವೆ ಎಂದರು.
ಈ ತನಿಖೆಯಲ್ಲಿ ಅಂತಾರಾಜ್ಯ, ವಿದೇಸಿಗರು ಬರುವುದರಿಂದ ತನಿಖೆ ನಿಗದಿತ ಸಮಯದಲ್ಲಿ ಮುಗಿಯಲಿದೆಯೋ, ತನಿಖೆಗೆ ಎಷ್ಟು ದಿನ ಬೇಕಾಗುವುದು ಎಂಬುದನ್ನು ಹೇಳಲು ಆಗಲ್ಲ ಎಂದು ಅವರು ಹೇಳಿದರು
ಬಿಟ್‌ಕಾಯಿನ್ ಹಗರಣದ ತನಿಖೆಗೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಸಚಿವರು ಹೇಳಿದ ಬೆನ್ನಲ್ಲೆ ಸಿಐಡಿಯಲ್ಲಿ ಎಡಿಜಿಪಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ.