
ಶಹಾಪುರ :ಮಾ.16: ಶಹಾಪುರ ನಗರದಲ್ಲಿ ಎಲ್ಲಿಬೇಕೆಂದರಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದರಿಂದ ಸ್ಥಳೀಯ ಜನತೆ ಬೇಸತ್ತು ಹೋಗಿದ್ದು ಇದೀಗ ಈ ಸಮಸ್ಯೆಗೆ ಮುಕ್ತಿ ನೀಡಲು ನಗರಸಭೆಯು ರಸ್ತೆ ಅಪಘಾತ, ಸಂಚಾರಕ್ಕೆ ಅಡಚಣೆ ಉಂಟಾಗಿದ್ದಲ್ಲಿ ಪುರಸಭೆ ಕಾಯ್ದೆ 1964 239 ಹಾಗೂ ಪೆÇಲೀಸ್ ಆಕ್ಟ್ ಕಲಂ 930 ಪ್ರಕಾರ ಕಠಿಣ ಹಾಗೂ 92,93, ಪ್ರಾಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ರಮೇಶ ಬಡಿಗೇರ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ತಿಳಿಸಿರುವ ಅವರು ದಿನೇ ದಿನೇ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು ನಗರದ ಮುಖ್ಯರಸ್ತೆಯ ಮೇಲೆ ದನಗಳನ್ನು ಬೇಕಾಬಿಟ್ಟಿಯಾಗಿ ಬಿಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕ ಹಾಗೂ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಬಿಡಾಡಿ ದನಗಳ ಮಾಲೀಕರು ಬೇಕಾಬಿಟ್ಟಿಯಾಗಿ ದನಗಳನ್ನು ರಸ್ತೆಗೆ ಬಿಡಬಾರದು ಎಂದು ಸೂಚಿಸಿದ್ದು ಒಂದು ವೇಳೆ ರಸ್ತೆಗೆ ಬಿಟ್ಟರೆ ದನಗಳ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.