ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಸಚಿವ ಆನಂದ್ ಸಿಂಗ್ ಅವಿರೋಧ ಆಯ್ಕೆ

ಬಳ್ಳಾರಿ ಜ 03 : ಜಿಲ್ಲೆಯ ಹೊಸಪೇಟೆಯಲ್ಲಿ‌ಪ್ರಧಾನ‌ ಕಚೇರಿ ಹೊಂದಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅರಣ್ಯ ಸಚಿವ ಆನಂದ ಸಿಂಗ್ ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ಕೃಷಿ, ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ ಕ್ಷೇತ್ರದಿಂದ ಸಚಿವ ಆನಂದ ಸಿಂಗ್ ಅವರು ಡಿ. 24ರಂದು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಡಿ. 31 ಕೊನೆ ದಿನವಾಗಿತ್ತು. ಬೇರೆ ಯಾರು ನಾಮಪತ್ರ ಸಲ್ಲಿಸಿದ್ದರಿಂದ ನಿನ್ನೆ ಅವರನ್ನು ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಘೋಷಣೆ ಮಾಡಲಾಗಿದೆ.