ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ: ಕ್ರಮಕ್ಕೆ ಆಗ್ರಹಿಸಿ ರÉೈತ ಸಂಘ ಮನವಿ

ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.30:ಪ್ರಸಕ್ತ ಸಾಲಿನ ಹಂಗಾಮಿನ ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ಸರಕಾರದ ನಿಗದಿತ ದÀರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಶಾಶ್ವತ ಲೈಸನ್ಸ್ ರದ್ದು ಮಾಡಬೇಕು ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೃಷಿ ಆಯುಕ್ತ ವೈ.ಎಸ್. ಪಾಟೀಲ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮಾತನಾಡಿ, ಜಿಲ್ಲೆಯಲ್ಲಿ ಅಧಿಕೃತ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರು ಪ್ರತಿವರ್ಷ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹತ್ತಿ ಬೀಜ- ನಾರ್ಥ ಸೀಡ್ಸ್ ಸಂಕೇತ, ಮತ್ತು ಯು ಎಸ್ ಅಗ್ರಿ ಸೀಡ್ಸ್ 7067 ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಲೈಸನ್ಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಬೀಜ, ಗೊಬ್ಬರ, ಕೀಟನಾಶಕಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಕೃಷಿ ಇಲಾಖೆಯಿಂದ ತಾತ್ಕಾಲಿಕವಾಗಿ ಪರವಾನಿ ರದ್ದುಗೊಂಡವರು, ಮತ್ತೇ ಈ ವರ್ಷ ಕೂಡಾ ಇದೇ ರೀತಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿರುವುದು ಕಂಡು ಬಂದಲ್ಲಿ ಅವರ ಪರವಾನಿಗೆಯನ್ನು ಶಾಶ್ವತವಾಗಿ ರದ್ದು ಮಾಡಬೇಕು ಎಂದರು.
ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಾಗೃತಿದಳ (ವಿಜಿಲೆನ್ಸ್) ಹೆಚ್ಚಿಗೆ ಮಾಡಿ, ಪ್ರತಿ ತಾಲೂಕಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಹಾಗೂ ಇಲಾಖೆಯ ಪರವಾನಿಗೆ ಪಡೆಯದೇ (ಪಿ.ಸಿ) ಅನಧಿಕೃತ ಮತ್ತು ಕಳಪೆ ಗುಣಮಟ್ಟದ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇದರಿಂದ ಮುಗ್ದ ರೈತರು ಅನ್ಯಾಯಕ್ಕೊಳಗಾಗಿ ಸಾಲದ ಬಾಧೆಯಿಂದ ರೈತ ಆತ್ಮಹತೈ ಮಾಡಿಕೊಳ್ಳುವುದು ತಪ್ಪುತ್ತದೆ ಎಂದು ನುಡಿದರು.
ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಸುಬೇದಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಿ2 ಮತ್ತು ಜಿ3 ಎಂಬ ಹೆಸರಿನಲ್ಲಿ ಪರವಾನಿಗೆ ಪಡೆದು (ಕೆಮಿಕಲ್ಸ್) ವಿಷವನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಅವುಗಳನ್ನು ತಜ್ಞರಿಂದ (ಲ್ಯಾಬ್‍ಟೆಸ್ಟ್) ತಪಾಸಣೆ ಮಾಡಿ, ರೈತರಿಗೂ ಹಾಗೂ ಸರಕಾರಕ್ಕೂ ಆಗುತ್ತಿರುವ ಮೋಸವನ್ನು ತಡೆಯಬೇಕು ಎಂದರು.
ರೈತ ಮುಖಂಡÀ ಸಂತೋಷ ಪೂಜಾರಿ ಮಾತನಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಕಳೆದ 2-3 ವರ್ಷಗಳಿಂದ ರೈತರಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ತಾಡಪಾಲ, ಸ್ಪ್ರಿಂಕ್ಲರ್ ಪೈಪ್, ಸ್ಪ್ರೇ ಪಂಪ್ ಇತರೆ ಕೃಷಿ ಯಂತ್ರೋಪಕರಣಗಳು ಹಾಗೂ ಬೆಳೆಗಳಿಗೆ ಸಿಂಪರಣೆ ಮಾಡುವ ಔಷಧಿಗಳು ಸಂಪೂರ್ಣ ಕಳಪೆ ಗುಣಮಟ್ಟದಾಗಿವೆ. ಅವುಗಳನ್ನು ಮರು ಪರಿಶೀಲಿಸಿ ತಪಾಸಣೆ ಮಾಡಿ ಮಾರುಕಟ್ಟೆಯಲ್ಲಿ ದೊರೆಯುವ ಉತ್ತಮ ಗುಣಮಟ್ಟದ ಔಷಧಿ ಹಾಗೂ ಯಂತ್ರೋಪಕರಣಗಳನ್ನು ರೈತರಿಗೆ ಪೂರೈಸಬೇಕು. ಒಂದುವೇಳೆ ಈ ವರ್ಷದಲ್ಲಿ ಕಳಪೆ ಗುಣಮಟ್ಟದ ಯಾವುದೇ ಕೃಷಿ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಕ್ಕೆ ಪೂರೈಸಿದವರನ್ನು ಆರ್.ಸಿ ಹೊಂದಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಪಡೆಯುವ ಎಲ್ಲಾ ಕೃಷಿ ಪರಿಕರಗಳು ಮತ್ತು ಇತರೆ ಸೌಲಭ್ಯಗಳ ಕಾಲಮಿತಿಯನ್ನು 3 ವರ್ಷಗಳಿಗೆ ಕಡಿತಗೊಳಿಸಬೇಕು. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದರು.