ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಕ್ರಮ

ದಾವಣಗೆರೆ. ಜೂ.೧: ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರು ಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ, ಅವಶ್ಯವಿರುವಷ್ಟು ಗೊಬ್ಬರ ಮಾತ್ರ ಖರೀದಿಸಬೇಕು ಎಂದು  ಶಾಸಕ ಪ್ರೊ. ಲಿಂಗಣ್ಣ  ಮನವಿ ಮಾಡಿದರು. ಆನಗೋಡು ರೈತ ಸಂಪರ್ಕ ಕೇಂದ್ರ ಕಛೇರಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಕಳೆದ ವಾರದಿಂದ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು ಎಲ್ಲಾ ಭಾಗದ ರೈತರು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕೂಡಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡುವಂತೆ ಸೂಚಿಸಿದ್ದರ ಹಿನ್ನೆಲೆಯಲ್ಲಿ ಸೋಮವಾರದಿಂದ ಬೀಜ ವಿತರಣೆ ಪ್ರಾರಂಭಿಸಲಾಗಿದೆ. ಅಂತರಾಷ್ಟಿçÃಯ ಮಟ್ಟದಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ಡಿಎಪಿ ಗೊಬ್ಬರದ ಬೆಲೆ ಹೆಚ್ಚಾಗಿದ್ದರೂ, ಕೋವಿಡ್-19ರ ಸಂಕಷ್ಟ ಸಮಯದಲ್ಲಿ ರೈತರಿಗೆ ಕೃಷಿ ಪರಿಕರಗಳನ್ನು ಖರೀದಿಸಲು ಕಷ್ಟವಾಗುತ್ತಿರುವುದನ್ನು ಮನಗಂಡು ಪ್ರಧಾನಿಯವರು ಏರಿಕೆಯಾಗಿದ್ದ ಡಿಎಪಿ ಗೊಬ್ಬರದ ಬೆಲೆಯನ್ನು 1200 ರೂ.ಗಳಿಗೆ ಇಳಿಸಿದ್ದಾರೆ. ಸಂಸದರು ಸಹ ನಮ್ಮ ಮನವಿಯಂತೆ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರದ ಕುರಿತು ಕೇಂದ್ರ ರಸಗೊಬ್ಬರ ಮಂತ್ರಿಗಳೊAದಿಗೆ ಮಾತನಾಡಿ ಜಿಲ್ಲೆಗೆ ಅವಶ್ಯವಿರುವಷ್ಟು ಸರಬರಾಜು ಮಾಡಲು ಕ್ರಮ ಕೈಗೊಂಡಿರುತ್ತಾರೆ. ಆದ್ದರಿಂದ ಯಾವುದೇ ರೈತರು ಅನಗತ್ಯವಾಗಿ ಗೊಬ್ಬರ ಖರೀದಿಗೆ ಮುಂದಾಗಬಾರದು ಹಾಗೂ ಅವಶ್ಯವಿರುವಷ್ಟು ಗೊಬ್ಬರವನ್ನು ಮಾತ್ರ ಖರೀದಿಸಬೇಕು. ಬಿತ್ತನೆ ಬೀಜ ಹಾಗೂ ಗೊಬ್ಬರದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನಮೂರ್ತಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಂಕ್ರಾಮಿಕ ರೋಗದ ಹಿನ್ನೆಲೆ ರೈತರು ಕೋವಿಡ್-19 ನಿಯಮಗಳನ್ನು ಪಾಲಿಸಿಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ರೈತರಿಗೆ ಮನವಿ ಮಾಡಿದರು.ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೆಚ್.ಕೆ., ಕೃಷಿ ಅಧಿಕಾರಿ ರವಿಕುಮಾರ್, ಸಹಾಯಕ ಕೃಷಿ ಅಧಿಕಾರಿ ಬಿ.ಕೆ. ಚಂದ್ರಪ್ಪ, ಗ್ರಾಮದ ಮುಖಂಡರಾದ ವಸಂತಕುಮಾರ್ ಮತ್ತು ಇತರೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.