ಬಿದರಹಳ್ಳಿ ಸಮಗ್ರ ಅಭಿವೃದ್ಧಿಗೆ 72 ಕೋಟಿ ಅನುದಾನ

ಕೆ.ಆರ್.ಪುರ,ಜು.೨೫- ಮಹದೇವಪುರ ಕ್ಷೇತ್ರ ನಗರ ಹಾಗೂ ಗ್ರಾಮೀಣ ಭಾಗವನ್ನು ಒಳಗೊಂಡಿದ್ದು ಎರಡು ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು,ಬಿದರಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ೭೨ ಕೋಟಿ ಅನುದಾನ ನೀಡಿದ್ದೆನೆ ಎಂದು ಶಾಸಕಿ ಮಂಜುಳಾ ಲಿಂಬಾವಳಿ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಗ್ರಾಮ ಪಂಚಾಯಿತಿ ಸಮೀಪದ ಆವರಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಬಿದರಹಳ್ಳಿ ಗ್ರಾಮ ಪಂಚಾಯಿತಿಯ ಮೊದಲ ಸುತ್ತಿನ ಗ್ರಾಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗವನ್ನು ಬಿಬಿಎಂಪಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಯೋಜನೆಗಳನ್ನು ರೂಪಿಸಿದ್ದು,ಬಿದರಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅರವಿಂದ ಲಿಂಬಾವಳಿ ಅವರು ಕಳೆದ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ೭೨ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ, ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ,ಆದಷ್ಟು ಬೇಗ ಪೂರ್ಣಗೊಳಿಸುವ ಮೂಲಕ ಮಾದರಿ ಪಂಚಾಯತಿಯಂತೆ ರೂಪಿಸಲಾಗುವುದು ಎಂದು ತಿಳಿಸಿದರು.
ಬಿದರಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಕಾಮಗಕ್ಕೆ ೬ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ, ಬಡವರಿಗೆ ಪತ್ರಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಿದರಹಳ್ಳಿಯಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿದರಹಳ್ಳಿ ಪಂಚಾಯತಿ ಅಧ್ಯಕ್ಷ ಬಿ.ಜಿ.ರಾಜೇಶ್ ಅವರು ಮಾತನಾಡಿ ಬಿದರಹಳ್ಳಿ ಪಂಚಾಯತಿಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದ್ದು,ಹಂತಹಂತವಾಗಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.