ಬಿಬಿಎಂಪಿಯಿಂದ ಮತದಾನ ಜಾಗೃತಿ ಜಾಥ

ಬೆಂಗಳೂರು.ಏ೧೧:ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ,ಸಿದ್ದಯ್ಯ ಪುರಾಣಿಕ್ ರಸ್ತೆ, ಬಸವೇಶ್ವರನಗರದಲ್ಲಿರುವ ಸರ್ಕಾರಿ ಹೊಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥ ಕಾರ್ಯಕ್ರಮ.
ಸಹಾಯಕ ಕಾರ್ಯಪಾಲಕ ಅಭಿಯಂತರ,ನೋಡಲ್ ಅಧಿಕಾರಿ ಉಮೇಶ್ ರವರು, ಸಹಾಯಕ ಅಭಿಯಂತರಾದ ವಿಜಯಕುಮಾರ್, ಕಂದಾಯಧಿಕಾರಿ ರಾಜೇಂದ್ರನ್ ಬಿಬಿಎಂಪಿ ಅಧಿಕಾರಿಗಳಾದ ಮಮತ, ಪ್ರಶಾಂತ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ಗುರುಪ್ರಸಾದ್,ಯುನಾನಿ ಕಾಲೇಜು ಪ್ರಾಂಶುಪಾಲರಾದ ಮಂಜುಳರವರು ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಮತದಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ದಾಸರಹಳ್ಳಿ, ಬಸವೇಶ್ವರನಗರ ಹಾಗೂ ಗೋವಿಂದರಾಜನಗರ ವಿವಿಧ ಪ್ರದೇಶದಲ್ಲಿ ಜಾಗೃತಿ ಜಾಥ ಸಾಗಿತು.ನೋಡಲ್ ಅಧಿಕಾರಿ ಉಮೇಶ್ ರವರು ಮಾತನಾಡಿ ಆಡಳಿತಗಾರರಾದ ರಾಕೇಶ್ ಸಿಂಗ್ ರವರು, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾರ್ಗದರ್ಶನದಲ್ಲಿ ಮತದಾರರಿಗೆ ಮತದಾನದ ಮಹತ್ವದ ಅರಿವು ಮೂಡಿಸಲು ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ.
ನಗರ ಪ್ರದೇಶದಲ್ಲಿ ಹೆಚ್ಚಿನ ರೀತಿಯಲ್ಲಿ ಮತದಾನವಾಗಬೇಕು ಹಾಗೂ ನಿರ್ಭಿತಿ, ಭಯಮುಕ್ತರಾಗಿ ಮತಗಟ್ಚೆಗೆ ಬಂದು ಮತದಾನ ಮಾಡಬೇಕು ಎಂಬ ಉದ್ದೇಶದಿಂದ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ.ಪ್ರಜಾಪ್ರಭುತ್ವ ಪ್ರತಿಯೊಬ್ಬ ನಾಗರಿಕಕನಿಗೆ ಮತದಾನ ಹಕ್ಕು ಸಂವಿಧಾನ ನೀಡಿದೆ ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.