ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗೆ ಅಧಿಕಾರಿಗಳ ನೇಮಕ

ಬೆಂಗಳೂರು, ಜು.22- ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಪ್ರಕ್ರಿಯೆ ಚುರುಕುಗೊಂಡಿದ್ದು, ಪಾಲಿಕೆ ವಾರ್ಡ್‍ವಾರು ಮತದಾರರ ಪಟ್ಟಿಯನ್ನು ತಯಾರಿಸಲು ಮತ್ತು ಚುನಾವಣಾ ಕಾರ್ಯಗಳನ್ನು ವಿದ್ಯುಕ್ತವಾಗಿ ನಿರ್ವಹಿಸಲು ಚುನಾವಣಾ ರಾಜ್ಯ ಸರ್ಕಾರ ಅಧಿಕಾರಿಗಳನ್ನು ನೇಮಕ ಮಾಡಿದೆ.

ರಾಜರಾಜೇಶ್ವರಿನಗರ, ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಯಾಗಿ ಬಿಬಿಎಂಪಿಯ ಆಡಳಿತ ವಿಭಾಗದ ವಿಶೇಷ ಆಯುಕ್ತರನ್ನು ನೇಮಿಸಲಾಗಿದೆ.

ಅದೇ ರೀತಿ, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಯಾಗಿ ಬಿಬಿಎಂಪಿಯ ದಕ್ಷಿಣ ವಲಯದ ಜಂಟಿ ಆಯುಕ್ತರನ್ನು ನೇಮಿಸಲಾಗಿದೆ.

ಕೆಆರ್ ಪುರ, ಮಲ್ಲೇಶ್ವರಂ, ಹೆಬ್ಬಾಳ ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‍ನಗರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಯಾಗಿ ಬಿಬಿಎಂಪಿಯ ಪೂರ್ವ ವಲಯದ ಜಂಟಿ ಆಯುಕ್ತರನ್ನು ನೇಮಿಸಲಾಗಿದೆ. ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಯಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.