ಬಿಬಿಎಂ‍ಪಿ ಗುತ್ತಿಗೆದಾರ ಆತ್ಮಹತ್ಯೆ

ಬೆಂಗಳೂರು,ಜ.7-ಗುತ್ತಿಗೆ ಬಾಕಿ ಹಣಕ್ಕಾಗಿ ಅಲೆದಾಡಿ ಬೇಸತ್ತ ಬಿಬಿಎಂ‍ಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ.
ವೈಯಾಲಿಕಾವಲ್‌ನ ವನಿ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡವರು.
ರಾಜಾಜಿನಗರ ಕಾಂಪ್ಲೆಕ್ಸ್ ಸೇರಿದಂತೆ ಹಲವು ಕಟ್ಟಡಗಳನ್ನು ಇವರು ನಿರ್ಮಾಣ ಮಾಡಿದ್ದರು. ಕಟ್ಟಡ ನಿರ್ಮಾಣವೊಂದರ ಗುತ್ತಿಗೆ ಬಾಕಿ ಹಣ ನೀಡುವಂತೆ ಹಲವು ಬಾರಿ ಪಾಲಿಕೆಗೆ ಮನವಿ ಮಾಡಿದ್ದರು.ಆದರೂ ಹಣ ಬಾರದಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ಡಾ.ರಾಜಕುಮಾರ್ ಒಳಾಂಗಣ ಕ್ರೀಡಾಂಗಣದ ಬಳಿ ನಿರ್ಮಾಣ ಹಂತದ ಕಟ್ಟಡದ ಕೋಣೆಯೊಂದರಲ್ಲಿ ನಿನ್ನೆ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.