ಬಿಮ್ಸ್‍ಗೆ ಡಿಸಿಎಮ್ ಭೇಟಿ

ಬೆಳಗಾವಿ,ಮೇ 29:ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ಇದೇ ಸಮಯದಲ್ಲಿ ಕೊರೊನಾ ಸೋಂಕಿತರನ್ನು ಮಾತನಾಡಿಸಿ ಧೈರ್ಯತುಂಬಿದರು. ಸೋಂಕಿತರಾರು ಎದೆಗುಂದಬಾರದು ಬೇಗ ಗುಣಮುಖರಾಗಿ ಬನ್ನಿ ಎಂದು ಆಶಿಸಿದರು. ಇದೆ ಸಮಯದಲ್ಲಿ ಆಸ್ಪತ್ರೆ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನ ನಿರ್ದೇಶಕರಿಗೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು ಕೂಡಲೇ ವ್ಯವಸ್ಥೆಯನ್ನು ಸರಿಪಡಿಸಿ ಶುಚಿತ್ವ ಕಾಪಾಡಿಕೊಂಡು ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.