ಬಿರುವೆರ್ ಕುಡ್ಲದಿಂದ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

ಮಂಗಳೂರು, ಜೂ.೨- ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಮಂಗಳೂರು ನಗರಕ್ಕೆ ಉಚಿತವಾಗಿ ಆಂಬುಲೆನ್ಸ್ ಸೇವೆ ಆರಂಭವಾಗಲಿದ್ದು, ಆಕ್ಸಿಜನ್ ಸಹಿತ ಅತ್ಯಾಧುನಿಕ ಸೌಲಭ್ಯ ಇರುವ ಆಂಬುಲೆನ್ಸ್ ನ್ನು ಮಂಗಳವಾರ ಸಂಸದ ನಳಿನ್ ಕುಮಾರ್ ಕಟೀಲು ಶ್ರೀ ಕ್ಷೇತ್ರ ಕುದ್ರೋಳಿ ದೇವಳದಲ್ಲಿ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು,  ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶದಂತೆ ಬಿರುವೆರ್ ಕುಡ್ಲ ಸಂಘಟನೆ ಬಡವರಿಗೆ ನೆರವು ನೀಡುತ್ತಾ ಬರುತ್ತಿದ್ದು, ಇದೀಗ  ಕೊರೋನ ಸಂದರ್ಭ ಸರಕಾರದ ಜತೆ ಕೈ ಜೋಡಿಸಿ ಉಚಿತ ಆ ಂಬುಲೆನ್ಸ್ ಸೇವೆ ಆರಂಭಿಸಿರುವುದು ಶ್ಲಾಘನೀಯ ಎಂದರು. ಶಾಸಕರಾದ ಡಾ.ಭರತ್ ಶೆಟ್ಟಿ ವೈ., ಡಿ.ವೇದವ್ಯಾಸ ಕಾಮತ್ ಶುಭ ಹಾರೈಸಿದರು. ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಾಯಿರಾಂ, ನಮ್ಮ ಟಿವಿಯ ಆಡಳಿತ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ, ಕೆ.ಟಿ.ಸುವರ್ಣ, ಜಗದೀಪ್ ಸುವರ್ಣ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ಹಾಗೂ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.