ಬಿಸಿಎಂ ಇಲಾಖೆಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ

ಸಂಜೆವಾಣಿ ವಾರ್ತೆ
ದಾವಣಗೆರೆ; ಫೆ.21;   ನಗರದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸಿದರು.
 ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ವಿದ್ಯಾರ್ಥಿಗಳು ಹಾಸ್ಟೆಲ್‍ನಿಂದ ದುಗ್ಗಮ್ಮ ದೇವಸ್ಥಾನದವರೆಗೆ ಬೈಕ್‍ರ್ಯಾಲಿ ನಡೆಸಿದರು. ಈ ರ್ಯಾಲಿಗೆ ಜಿ.ಪಂ ಉಪಕಾರ್ಯದರ್ಶಿ ಕೃಷ್ಣ ನಾಯಕ್  ಚಾಲನೆ ನೀಡಿದರು.ಡಿಸಿಎಂ ಟೌನ್ ಶಿಪ್ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ, ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರು ಕ್ಯಾಂಡಲ್ ಹಚ್ಚುವುದರ ಮೂಲಕ ಸಂವಿಧಾನ ಜಾಗೃತಿ ಮೂಡಿಸಿದರು. ಈ ವೇಳೆ ಜಿಲ್ಲಾ ಬಿಸಿಎಂ ಅಧಿಕಾರಿ ಗಾಯತ್ರಿ, ತಾಲ್ಲೂಕು ಅಧಿಕಾರಿ ಪುಷ್ಪಾ ಹಾಗೂ ವಾರ್ಡನ್‍ಗಳು ಭಾಗವಹಿಸಿದ್ದರು.