ಬಿಸಿಎಂ ಕಚೇರಿಯಲ್ಲಿ ಶ್ರೀ ಮಹಾವೀರ ಜಯಂತಿ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಏ.4 : – ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಇಂದು ಬೆಳಿಗ್ಗೆ ಮಹಾವೀರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಪಾಪತಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತ ಮಹಾವೀರರ ಸರಳ ಜೀವನ ಹಾಗೂ ತತ್ವಸಿದ್ಧಾಂತ ನಮಗೆಲ್ಲಾ ಆದರ್ಶವಾಗಬೇಕು ಎಂದರು.
ಈ ಸಂದರ್ಭದಲ್ಲಿ  ನಿಲಯ ಮೇಲ್ವಿಚಾರಕರಾದ ಅಂಜಿನಪ್ಪ ಸಿ , ಕುಮಾರಸ್ವಾಮಿ,ಹಾಗೂ ಬಸಪ್ಪ ಮತ್ತು ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.