ಬಿಸಿಲಿನ ಝಳಕ್ಕೆ ಕಾರ್ಮಿಕ ಸಾವು

ಬಸವಕಲ್ಯಾಣ:ಮೇ.10: ತಾಲೂಕಿನ ಚಿಟ್ಟಾ ಗ್ರಾಮದಲ್ಲಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿಧದು, ಬಿಸಿಲಿನ ಝಳದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ನಿವಾಸಿ ಮಲ್ಲಪ್ಪ ತೋಗರಖೇಡೆ (58) ಮೃತ ವ್ಯಕ್ತಿಯಾಗಿದ್ದಾನೆ.

ಗ್ರಾಮ ಪಂಚಾಯತ್’ನಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೀರಿನ ಇಂಗು ಗುಂಡಿ ತೋಡುವಾಗ ಆಕಸ್ಮಿಕ ಪ್ರಜ್ಞಾಹಿನನಾಗಿ ಬಿದ್ದಿದ್ದು, ತಕ್ಷಣ ಚಿಕಿತ್ಸೆಗಾಗಿ ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟದ್ದಾನೆ.

ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ. ತಾ.ಪಂ ಇಓ ರಮೇಶ ಸುಲ್ಫಿ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.