ಬಿಸಿಲಿನ ತಾಪ ೨೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ,ಏ.೧-ಬಿಸಿಲಿನ ತಾಪಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ೧೦ ವರ್ಷದೊಳಗಿನ ೨೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ೪೦ ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ತಾಪಮಾನ ದಾಖಲಾಗುತ್ತಿದೆ.
ಈ ವರ್ಷ ಗರಿಷ್ಠ ತಾಪಮಾನ ೪೫ ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಕಳೆದ ವಾರ ಬರಗಾಲದಿಂದ ತೀವ್ರ ಬಿಸಿಲಿನ ತಾಪ ಎದುರಿಸುತ್ತಿರುವ ಬಳ್ಳಾರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಿದೆ.ದಾಖಲಾದ ಮಕ್ಕಳು ನಿರ್ಜಲೀಕರಣ, ಜ್ವರ ಮತ್ತು ವಾಂತಿಯಿಂದ ಬಳಲುತ್ತಿರುವುದು ಕಂಡುಬಂದಿದೆ.ಬಳ್ಳಾರಿ ಜಿಲ್ಲಾಡಳಿತವು ನಾಗರಿಕರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಮಧ್ಯಾಹ್ನ ೧ ರಿಂದ ಸಂಜೆ ೪ ರವರೆಗೆ ನೇರ ಸೂರ್ಯನ ಬೆಳಕಿನಲ್ಲಿ ಯಾವುದೇ ರಕ್ಷಣೆಯಿಲ್ಲದೆ ಹೊರಗೆ ಹೋಗದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.