ಬಿಸಿಲಿನ ರಕ್ಷಣೆಗಾಗಿ ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯಿರಿ : ಶೇರಿಕಾರ

ಸಂಜೆವಾಣಿ ವಾರ್ತೆ
ಔರಾದ :ಏ.28: ಈ ವರ್ಷ ಬೇಸಿಗೆ ಕಾಲದಲ್ಲಿ ಪ್ರತಿ ವರ್ಷದ ತಾಪಮಾನಕ್ಕಿಂತ 2-3 ಅಧಿಕ ಪಟ್ಟು ತಾಪಮಾನ ದಾಖಲಾಗುತ್ತಿದ್ದು, ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಆದುದರಿಂದ ಬಿಸಿಲಿನಿಂದ ರಕ್ಷಣೆ ಯಾವ ರೀತಿ ಮಾಡಿಕೊಳ್ಳಬೇಕು, ಬಿಸಿಲಿನ ರಕ್ಷಣೆಗಾಗಿ ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯಬೇಕು.ಎಂದು ಬೀದರ್ ಜಿಲ್ಲಾ ರಿಲಯನ್ಸ್ ಫೌಂಡೇಶನ್ ಕಾರ್ಯಕ್ರಮ ವ್ಯವಸ್ಥಾಪಕ ರಾಮಚಂದ್ರ ಶೇರಿಕರ್ ಪತ್ರಿಕೆ ಪ್ರಕಟಣೆ ನೀಡುವ ಮೂಲಕ ಸಲಹೆ ನೀಡಿದ್ದಾರೆ.
ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ ಅಥವಾ ಛತ್ರಿಯನ್ನು ಬಳಸಬೇಕು. ಮನೆಯಲ್ಲಿ ಆದಷ್ಟು ಫ್ಯಾನ ಬಳಸಬೇಕು. ಓ ಆರ್ ಎಸ್ ದ್ರಾವಣ , ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಬಳಸಬೇಕು. ಹಾಗೂ ಬಿಸಿಲಿನ ತಾಪಮಾನದಿಂದ ತಪ್ಪಿಸಿಕೊಳ್ಳಲು ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್ , ಚಹಾ, ಕಾಫೀ, ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು.

ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸದೇ ಹೊರಹೋಗಬಾರದು.ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಬೇಕು.ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಧ್ಯವಾದ ಮಟ್ಟಿಗೆ ವಿಶೇಶವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ). ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. . ಅಧಿಕ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು). ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯಬೇಕು. ಸಾಧ್ಯವಾದ ಬಿಸಿ ಆಹಾರವನ್ನು ಸೇವಿಸುತ್ತಾ ಸಾರ್ವಜನಿಕರು ಈ ಮೇಲಿನ ಸಲಹೆ, ಸೂಚನೆಗಳು ಅನುಸರಿಸಬೇಕು ಹೆಚ್ಚಿನ ಮಾಹಿತಿಗೆ ರಿಲಯನ್ಸ್ ಫೌಂಡೇಶನ್ ಉಚಿತ ದೂರವಾಣಿ ಕರೆ 18004198800 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.