ಬಿಹಾರಕ್ಕೆ ನಿತೀಶ್ ಸಿಎಂ: ಬಿಜೆಪಿ ಸ್ಪಷ್ಟನೆ

ನವದೆಹಲಿ, ನ.೧೧- ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ . ಕೊಟ್ಟ ಮಾತಿಗೆ ಬದ್ಧವಾಗುವುದಾಗಿ ಬಿಜೆಪಿ ಇಂದಿಲ್ಲಿ ಸ್ಪಷ್ಟಪಡಿಸಿದೆ.

ಬಿಹಾರ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ೧೨೫ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ.

ಮಿತ್ರಕೂಟದಲ್ಲಿ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಹೀಗಾಗಿ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳ ಬೆನ್ನಲ್ಲೇ ಬಿಜೆಪಿ ಈ ಸ್ಪಷ್ಟನೆ ನೀಡಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಿತ್ರ ಪಕ್ಷ ಬಿಜೆಪಿ ೭೪ ಸ್ಥಾನಗಳನ್ನು ಪಡೆದಿದ್ದಾರೆ ಜೆಡಿಎಸ್ ೪೩ ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಹೀಗಾಗಿ ದೊಡ್ಡಣ್ಣನ ಸ್ಥಾನ ಕಳೆದು ಕೊಂಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ನೈತಿಕತೆಯ ಪ್ರಶ್ನೆ ಎದುರಾಗಿದೆ.

ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಮುಖ್ಯಮಂತ್ರಿ ಸ್ಥಾನವನ್ನು ತಮಗೆ ಬಿಟ್ಟು ಕೊಡಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ ಎನ್ನಲಾಗುತ್ತಿರುವ ನಡುವೆ ಬಿಜೆಪಿಯಿಂದ. ಈ ಸ್ಪಷ್ಟನೆ ಹೊರಬಿದ್ದಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಬಿಹಾರದಲ್ಲಿ ಎರಡು ಪಕ್ಷಗಳು ಜಂಟಿಯಾಗಿ ಚುನಾವಣೆಯನ್ನು ಎದುರಿಸಿದ್ದೇವೆ ಚುನಾವಣಾ ಪ್ರಚಾರ ಸಭೆಯಲ್ಲಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎಲ್ಲಾ ಕಡೆ ಪ್ರಕಟಿಸಿದ್ದೇವೆ ಅದರಂತೆ ನಡೆದುಕೊಳ್ಳುತ್ತೇವೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ತಿಳಿಸಿದೆ.

ಮುಖ್ಯಮಂತ್ರಿಯ ಕುರ್ಚಿಯ ಬಗ್ಗೆ ಈಗ ಚರ್ಚೆ ಅನವಶ್ಯಕ ನಾವು ಕೊಟ್ಟ ಮಾತನ್ನು ಈಡೇರಿಸುತ್ತೇವೆ ಮತ್ತು ಅದರಂತೆ ನಡೆದುಕೊಳ್ಳುತ್ತೇವೆ ಎಂದು ಬಿಹಾರದ ಬಿಜೆಪಿ ಘಟಕದ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಗೆ ಸಹಕಾರ ನೀಡದಿದ್ದರೆ ಬಿಜೆಪಿ ಇಷ್ಟೊಂದು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಹೀಗಾಗಿ ಮುಂದಿನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮುಂದುವರೆಯಲಿದ್ದಾರೆ ಈ ಬಗ್ಗೆ ಪಕ್ಷದ ಹೈಕಮಾಂಡ್ ಕೂಡ ಇದೇ ಮಾತು ಹೇಳಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಹೋಗಲಿದೆ ಎನ್ನುವ ಮಾತುಗಳು ಎಲ್ಲೆಡೆ ಕೇಳಿಬಂದಿದೆ ಬಗ್ಗೆ ಇನ್ನಷ್ಟೇ ಅಧಿಕೃತವಾಗಿ ಪ್ರಕಟಿಸಬೇಕಾಗಿದೆ ಆದರೆ ಸದ್ಯದ ಮಾಹಿತಿ ಪ್ರಕಾರ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ