ಬಿಹಾರದಲ್ಲೂ ತೈಲದ ಮೇಲಿನ ಅಬಕಾರಿ ಸುಂಕ ಕಡಿತ

ಪಟನಾ , ನ 4- ಬಿಹಾರದಲ್ಲೂ ಪೆಟ್ರೋಲ್ ಮತ್ರು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದೆ.
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ‌ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ , ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಕ್ರಮವಾಗಿ 3 ರೂ 20 ಪೈಸೆ ಹಾಗೂ 90 ರಷ್ಟು ಇಳಿಕೆ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ಇಂಧನ ದರಗಳ ಮೇಲಿನ ಸುಂಕ ಕಡಿಮೆ ಮಾಡಿದ್ದರಿಂದ ರಾಜ್ಯ ಸರ್ಕಾರವೂ ತೈಲದ ಮೇಲಿನ ವ್ಯಾಟ್ ದರಗಳನ್ನು ಇಳಿಸುವ ಮೂಲಕ ರಾಜ್ಯದ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ನಿನ್ನೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕ್ರಮವಾಗಿ 5 ಹಾಗೂ 10 ರೂಪಾಯಿಯಷ್ಟು ಇಳಿಕೆ ಮಾಡಿತ್ತು.
ಈ ಕ್ರಮವನ್ನು ಅನೇಕ ರಾಜ್ಯಗಳು ಅನುಸರಿಸುತ್ತಿವೆ. ಅದರಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಸುಂಕವನ್ನು ಇಳಿಕೆ ಮಾಡಿದೆ.