ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸೋಂಕಿಗೆ ಬಲಿ

ಪಾಟ್ನಾ, ಏ 30- ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರುಣ್‌ ಕುಮಾರ್‌ ಸಿಂಗ್‌ ಅವರು ಇಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಈ ಮೂಲಕ ಬಿಹಾರದಲ್ಲೂ ಸೋಂಕು ಮತ್ತಷ್ಟು ಉಲ್ಬಣಗೊಳ್ಳುತ್ತಿರುವುದು ಭೀತಿಗೆ ಕಾರಣವಾಗಿದೆ.

1985ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅರುಣ್‌ ಕುಮಾರ್‌ ಸಿಂಗ್‌ ಅವರು, ಇದೇ ವರ್ಷದ ಫೆಬ್ರವರಿ 28ರಂದು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ರಾಜ್ಯದಲ್ಲಿ ಅಭಿವೃದ್ಧಿ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು.

ಸೋಂಕಿಗೆ ಒಳಗಾಗಿದ್ದ ಸಿಂಗ್‌ ಅವರನ್ನು ಏಪ್ರಿಲ್‌ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಹಾರದಲ್ಲಿ ಇದೇ ತಿಂಗಳಲ್ಲಿ ಕೋವಿಡ್‌ ಸೋಂಕಿಗೆ ಒಳಗಾಗಿ ಸಾವಿಗೀಡಾದ ನಾಲ್ಕನೇ ಐಎಎಸ್‌ ಅಧಿಕಾರಿಯಾಗಿದ್ದಾರೆ.