ಬಿಹಾರ ಏ. 15 ರವರೆಗೆ ಶಾಲಾ-ಕಾಲೇಜು ಬಂದ್

ಪಾಟ್ನಾ, ಏ.೪- ಬಿಹಾರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ. ೧೧ರವರೆಗು ಶಾಲಾ-ಕಾಲೇಜುಗಳಿಗೆ ರಾಜ್ಯಸರ್ಕಾರ ರಜೆ ಘೋಷಿಸಿದೆ.
ಈ ಮೊದಲು ಏ. ೫ ರಿಂದ ಶಾಲಾ-ಕಾಲೇಜುಗಳು ಆರಂಭವಾಗಬೇಕಾಗಿತ್ತು. ಸೋಂಕು ತಡೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ ನೇತೃತ್ವದಲ್ಲಿ ಪರಿಸ್ಥಿತಿ ಅವಲೋಕಿಸಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಪುನರ್ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಬಸ್, ರೈಲ್ವೆ ನಿಲ್ದಾಣ, ತರಕಾರಿ ಕಾರುಕಟ್ಟೆಗಳಲ್ಲಿ ಹಾಗೂ ಹೋಟೆಲ್‌ಗಳಲ್ಲಿ ಹೆಚ್ಚಿನ ಜನಸಂದಣಿ ಸೇರಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜನರ ಮೇಲೆ ನಿಗಾ ವಹಿಸಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲು ಸರ್ಕಾರ ಆದೇಶಿಸಿದೆ.
ಸರ್ಕಾರಿ ಕಚೇರಿಗಳಿಗೆ ವಿವಿಧ ಕೆಲಸ ಕಾರ್ಯಗಳಿಗೆ ಬರುವ ಜನರಿಗೂ ನಿರ್ಬಂಧ ವಿದಿಸಲಾಗಿದ್ದು, ಸಾರಿಗೆ ಬಸ್‌ಗಳಲ್ಲಿ ಶೇ. ೫೦ರಷ್ಟು ಜನರು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.