ಬಿಹಾರ ಜಾತಿ ಗಣತಿ ಪ್ರಶ್ನಿಸಿ ಸುಪ್ರೀಂಗೆ ಮೊರೆ : ನಾಡಿದ್ದು ವಿಚಾರಣೆಗೆ ಸಮ್ಮತಿ

ನವದೆಹಲಿ,ಜ.11- ಬಿಹಾರ ಸರ್ಕಾರ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಯನ್ನು ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇದೇ 13 ರಂದು ನಡೆಸಲು ಒಪ್ಪಿಕೊಂಡಿದೆ.

ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಲು ಬಿಹಾರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ರಾಜ್ಯದಲ್ಲಿ ಜಾತಿವಾರು ಎಣಿಕೆ ಕಾರ್ಯ ಎಲ್ಲರಿಗೂ ಪ್ರಯೋಜನಕಾರಿಯಾಗಬಹುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಹಿಂದೆ ಹೇಳಿದ್ದರು.

ಜಾತಿ ಆಧಾರಿತ ಸಮೀಕ್ಷೆ ನಡೆಸುವುದರಿಂದ ರಾಜ್ಯದ ಎಲ್ಲಾ ಸಮುದಾಯದವರೆಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ನೆರವಾಗಲಿದೆ ಎಂದು ಬಿಹಾರ ಸರ್ಕಾರ ಹೇಳಿದೆ. ಕಳೆದ ಶನಿವಾರದಿಂದ ಆರಂಭವಾಗಿರುವ ಜಾತಿ ಗಣತಿಯನ್ನು ಭ್ರಷ್ಟಕ್ಕೆ ಹಲವು ಮಂದಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ

ಬಿಹಾರದಲ್ಲಿ ಕಳೆದ ಶನಿವಾರ ಆರಂಭವಾದ ಜಾತಿ ಆಧಾರಿತ ಜನಗಣತಿಯನ್ನು ‘ಐತಿಹಾಸಿಕ ಹೆಜ್ಜೆ, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದರು.

ಜಾತಿ ಗಣತಿಯಿಂದ ಜನರಿಗೆ ಕಲ್ಯಾಣ ಕಾರ್ಯಕ್ರಮ ನೀಡಲು ಸಾದ್ಯವಾಹಲಿದೆ. ವೈಜ್ಞಾನಿಕ ಡೇಟಾವನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ

ಸಮಾಜದ ದುರ್ಬಲ ವರ್ಗಗಳಿಗೆ ಯೋಜನೆಗಳ ಲಾಭ ತಲುಪಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ