ಬಿಹಾರ ನಿತೀಶ್ ೪ನೇ ಬಾರಿ ಸಿಎಂ

ಪಾಟ್ನಾ, ನ. ೧೧- ಬಿಹಾರದಲ್ಲಿ ಅಂತೂ ಇಂತೂ ಬಿಜೆಪಿ-ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ.
ಚುನಾವಣಾ ಪ್ರಚಾರ ಸಭೆಗಳಲ್ಲಿ ಪ್ರಕಟಿಸಿದಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಆದರೆ ಎಷ್ಟು ದಿನ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಾಗಿದೆ.
ಬಿಹಾರ ವಿಧಾನಸಭೆ ಚುನಾವಣೆಯ ೨೪೩ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು ಈ ಪೈಕಿ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ೧೨೫ ಸ್ಥಾನಗಳಿಸಿದೆ. ಈ ಪೈಕಿ ಬಿಜೆಪಿ ೭೪ ಸ್ಥಾನಗಳಿಸಿ ಮುಂದಿದೆ ಜೆಡಿಯು ಕೇವಲ ೪೩ ಸ್ಥಾನಗಳನ್ನು ಮಾತ್ರ ಪಡೆದಿದೆ. ಹೀಗಾಗಿ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಹೆಚ್ಚಾಗಿದೆ. ಆದರೆ ಪೂರ್ವನಿಗದಿಯಂತೆ ನಿತೀಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವ ಸಾಧ್ಯತೆಗಳಿವೆ ಆದರೆ ಎಷ್ಟು ದಿನ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಾಗಿದೆ.
ಆರ್ ಜೆ ಡಿ ಪಕ್ಷ ೭೫ ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೂ ಆರ್ ಜೆಡಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಕೇವಲ ೧೧೦ ಸ್ಥಾನಗಳನ್ನು ಮಾತ್ರ ಗೆದ್ದಿದೆ ಈ ಬಾರಿ ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರ ಹಿಡಿಯಲಿದೆ ಎನ್ನುವ ಎಲ್ಲ ನಿರೀಕ್ಷೆಗಳು ತಲೆಕೆಳಗಾಗಿವೆ.
೪ನೇ ಬಾರಿ ಮುಖ್ಯಮಂತ್ರಿಯಾಗಬೇಕು ಎನ್ನುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆಸೆ ಈಡೇರಲಿಲ್ಲ ಆದರೆ ಸತತವಾಗಿ ನಾಲ್ಕು ಬಾರಿ ಮುಖ್ಯಮಂತ್ರಿಯಾದ ಹೆಗ್ಗಳಿಕೆ ನಿತೀಶ್ ಕುಮಾರ್ ಅವರಿಗೆ ಸಲ್ಲಲಿದೆ.
ಹಂಚಿಕೆ ಸಾದ್ಯತೆ:
ಎನ್ ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಯು ನಡುವೆ ಮುಖ್ಯಮಂತ್ರಿ ಹುದ್ದೆಯನ್ನು ಸಮಾನವಾಗಿ ಹಂಚಿಕೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ
ಬಿಹಾರದಲ್ಲಿ ಜೆಡಿಯು ಗಿಂತ ಬಿಜೆಪಿ ದುಪ್ಪಟ್ಟು ಸ್ಥಾನಗಳನ್ನು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಬಿಜೆಪಿ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದರ ಮೇಲೆ ನಿತೀಶ್ ಕುಮಾರ್ ಅವರು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಅಥವಾ ಸೀಮಿತ ಅವಧಿಗೆ ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಿತ್ರ ಪಕ್ಷವಾಗಿದ್ದ ಲೋಕ ಜನಶಕ್ತಿ ಪಕ್ಷ ಹಲವು ಕಡೆ ಜೆಡಿಯು ಅಭ್ಯರ್ಥಿಗಳ ವಿರುದ್ಧ ಮಾತ್ರ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು ಹೀಗಾಗಿ ಜೆಡಿಯು ಹಲವು ಕಡೆ ಸೋಲಲು ಎಲ್ ಜೆಪಿ ಕಾರಣ ಎನ್ನುವ ಮಾತುಗಳು ಕೇಳಿ ಬಂದಿವೆ.
ಬಿಜೆಪಿ ಅಭ್ಯರ್ಥಿಗಳ ವಿರುದ್ಧ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅದರ ಗೆಲುವಿಗೆ ಲೋಕಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಕಾರ್ಯತಂತ್ರ ರೂಪಿಸಿದ್ದರು ಅದು ಯಶಸ್ವಿಯಾಗಿದೆ