ಬಿಹಾರ ಭಾರಿ ಮಳೆ ಸಿಡಿಲಿಗೆ ೧೫ ಮಂದಿ ಬಲಿ

ಪಾಟ್ನಾ .ಸೆ. ೧೬- ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸುರಿದ ಕುಂಭದ್ರೋಣ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ೧೫ ಮಂದಿ ದುರ್ದೈವಿಗಳು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಬಿಹಾರದ ೬ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಈ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮವಾಗಿ ೧೫ ಮಂದಿ ಬಲಿಯಾಗಿದ್ದಾರೆ.
ಮೃತರ ವಾರಸುದಾರರಿಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಮೃತರ ಕುಟುಂಬಗಳಿಗೆ ತಲಾ ೪ ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕಳೆದ ತಿಂಗಳು ಸಿಡಿಲಿನಿಂದ ಆರು ಮಂದಿ ಸಾವನ್ನಪ್ಪಿದ್ದರು. ಆ ಸಂದರ್ಭದಲ್ಲೂ ಮುಖ್ಯಮಂತ್ರಿಯವರು ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಇಲ್ಲಿ ಸ್ಮರಿಸಬಹುದಾಗಿದೆ.
ಈ ನಡುವೆ ಅವಮಾನ ಇಲಾಖೆ, ಬಿಹಾರದಲ್ಲಿ ಇಂದೂ ಸಹ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.